Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಯನಗರದಲ್ಲಿ ಮೊಬೈಲ್ ಐಸಿಯು ಕಂಟೇನರ್

ಜಯನಗರದ ಶಾಸಕಿಯಾದ ಸೌಮ್ಯ ರೆಡ್ಡಿ ಮತ್ತು ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಂಸ್ಥಾಪಕರಾದ ಮಹಾಂತೇಶ್ ಜಿಕೆ‌ ಒಂದು ಕಂಟೇನರ್ ವಾರ್ಡ್ ಐಸಿಯುವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ನವೀನ್ ಶುಕ್ಲ ಬೋರ್ಡ್ ಆಫ್ ಡೈರೆಕ್ಟರ್ ಇಎಮ್‌ಎಸ್‌ಟಿಪಿಎಲ್ ಮತ್ತು ಜಯನಗರ ಸಾರ್ವಜನಿಕ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದರು.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಯನಗರದಲ್ಲಿ ಮೊಬೈಲ್ ಐಸಿಯು ಕಂಟೇನರ್
ಮೊಬೈಲ್ ಐಸಿಯು ಕಂಟೇನರ್ ಉದ್ಘಾಟನೆ
Follow us
TV9 Web
| Updated By: ಆಯೇಷಾ ಬಾನು

Updated on:Jun 18, 2021 | 1:27 PM

ಬೆಂಗಳೂರು: ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು (ExxonMobil) ಇವರ ಸಹಾಯದಿಂದ ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೊಬೈಲ್ ಐಸಿಯು ಕಂಟೇನರ್ರನ್ನು ನೀಡಲಾಗಿದೆ.

ಜಯನಗರದ ಶಾಸಕಿಯಾದ ಸೌಮ್ಯ ರೆಡ್ಡಿ ಮತ್ತು ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಂಸ್ಥಾಪಕರಾದ ಮಹಾಂತೇಶ್ ಜಿಕೆ‌ ಒಂದು ಕಂಟೇನರ್ ವಾರ್ಡ್ ಐಸಿಯುವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ನವೀನ್ ಶುಕ್ಲ ಬೋರ್ಡ್ ಆಫ್ ಡೈರೆಕ್ಟರ್ ಇಎಮ್‌ಎಸ್‌ಟಿಪಿಎಲ್ ಮತ್ತು ಜಯನಗರ ಸಾರ್ವಜನಿಕ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಜಯನಗರದ ಶಾಸಕಿಯಾದ ಸೌಮ್ಯ ರೆಡ್ಡಿರವರು ಈ ಮೊಬೈಲ್ ಐಸಿಯು ಕಂಟೇನರ್ ವಾರ್ಡ್ ಕೊವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ತುಂಬಾ ಉಪಕಾರಿ ಯಾಗುವುದು ಇದನ್ನು ನೀಡಿದ ಸಮರ್ಥನಂ ಸಂಸ್ಥೆಯ ಮಹಾಂತೇಶ್ ರವರಿಗೆ ಧನ್ಯವಾದಗಳು ಎಂದು ಧನ್ಯವಾದ ತಿಳಿಸಿದ್ದಾರೆ. ಮತ್ತು ಸಮರ್ಥನಂ ಅಂಗವಿಕಲರ ಸಂಸ್ಥೆಯು ಕೊವಿಡ್ ಸಂದರ್ಭದಲ್ಲಿ ಬಹಳಷ್ಟು ಕೆಲಸ ಮಾಡಿದೆ. ಕೊವಿಡ್ ವಾರಿಯರ್ಸ್ ಆದ ವೈದ್ಯರು ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಬೇಕಿರುವ ಆರೋಗ್ಯ ಪರಿಕರಗಳನ್ನು ವಿತರಿಸುವ ಮೂಲಕ ತನ್ನ ಸಹಾಯ ಹಸ್ತವನ್ನು ಚಾಚಿದೆ ಇದಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು.

Mobile ICU Container

ಮೊಬೈಲ್ ಐಸಿಯು ಕಂಟೇನರ್ ಉದ್ಘಾಟನೆ

ಕಾರ್ಯಕ್ರಮದಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಂಸ್ಥಾಪಕರು ಹಾಗೂ ಡಾ ಮಹಾಂತೇಶ್ ರವರು ಮಾತನಾಡುತ್ತಾ ರಾಜ್ಯದಲ್ಲಿ 2ನೇ ಹಂತದ ಕೊವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದೆ ಈ ಸಂದರ್ಭದಲ್ಲಿ ಐಸಿಯು ವಾರ್ಡ್ಗಳು ಕೊವಿಡ್ ಸೋಂಕಿತರನ್ನು ಗುಣಪಡಿಸಲು ಬಹಳ ಪ್ರಮುಖವಾಗಿದೆ. ಸಂಸ್ಥೆಯು ExxonMobil ರವರ ಜೊತೆಗೂಡಿ ಈ ಒಂದು ಐಸಿಯು ಮೊಬೈಲ್ ಯೂನಿಟ್ನನ್ನು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ರೋಗಿಗಳ ಚಿಕಿತ್ಸೆ ನೀಡುವ ಸಲುವಾಗಿ ನೀಡಲಾಗಿದೆ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಸ್ಥೆ ಕಡೆಯಿಂದ ಕೊವಿಡ್ ಲಸಿಕೆ ಬಗ್ಗೆ ಜಾಗೃತಿ ಮೂಡಿಸಿ ಮತ್ತು ಅವರಿಗೆ ಲಸಿಕೆ ಹಾಕಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

Mobile ICU Container

ಮೊಬೈಲ್ ಐಸಿಯು ಕಂಟೇನರ್ ಉದ್ಘಾಟನೆ

ಸಂಸ್ಥೆಯ ಕುರಿತು ಸಮರ್ಥನಂ ಅಂಗವಿಕಲರ ಸಂಸ್ಥೆಯು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸ್ವಯಂ ಸೇವಾ ಸಂಸ್ಥೆಯಾಗಿದ್ದು, 1997 ರಿಂದ ಭಾರತದಲ್ಲಿ ದೃಷ್ಠಿಹೀನರ ವಿಕಲಚೇತನರು ಮತ್ತು ಅವಕಾಶ ವಂಚಿತರ ಸಬಲೀಕರಣಕ್ಕಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರಮುಖವಾಗಿ ಈ ಸಂಸ್ಥೆಯು ಗುಣಮಟ್ಟದ ಶಿಕ್ಷಣ, ವಸತಿ ಸೌಲಭ್ಯ, ಪೌಷ್ಠಿಕ ಆಹಾರ, ವೃತ್ತಿಪರ ತರಬೇತಿ ಮತ್ತು ಪುನರ್ವಸತೀಕರಣದ ಸೌಲಭ್ಯಗಳನ್ನು ಒದಗಿಸುವ ಮೂಲಕ ವಿಕಲಚೇತನರ ವೈಯಕ್ತಿಕ ಸ್ವಾವಲಂಬನೆಯನ್ನು ಸಾಧಿಸುವದಾಗಿದೆ. ಮತ್ತು ಸಮಾಜದಲ್ಲಿ ತಮ್ಮದೇ ಆಗಿರುವ ಪ್ರಮುಖ ಹೆಜ್ಜೆಯನ್ನು ಇಡುವಲ್ಲಿ ಸಹಾಯ ಮಾಡುವತ್ತ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಯು ದೃಷ್ಟಿ ವಿಕಲಚೇತನರ ಮತ್ತು ಅವಕಾಶ ವಂಚಿತರ ಅಭಿವೃದ್ಧಿಗಾಗಿ ತಾರತಮ್ಯ ರಹಿತ ಅವಕಾಶಗಳನ್ನು ಒದಗಿಸುವ ಕ್ರೂಡಿಕೃತ ಸಮಾಜವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಈ ಸಂಸ್ಥೆ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ.

ಇದನ್ನೂ ಓದಿ: Justice Santosh Hegde: ನಿವೃತ್ತ ನ್ಯಾ. ಸಂತೋಷ್ ಹೆಗಡೆಗೆ ವಂಚಿಸಲು ಯತ್ನ; ಸೈಬರ್ ಕ್ರೈಂ ಪೊಲೀಸರಿಗೆ ದೂರು

Published On - 1:23 pm, Fri, 18 June 21

SSLC,PUC ಬಳಿಕ ಮುಂದೇನು?ಚಿಂತೆ ಬೇಡ,ಟಿವಿ9 ಎಜುಕೇಷನ್ EXPOದಲ್ಲಿ ಭಾಗವಹಿಸಿ
SSLC,PUC ಬಳಿಕ ಮುಂದೇನು?ಚಿಂತೆ ಬೇಡ,ಟಿವಿ9 ಎಜುಕೇಷನ್ EXPOದಲ್ಲಿ ಭಾಗವಹಿಸಿ
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ
ಚಲಿಸುತ್ತಿರುವ ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧ
ಚಲಿಸುತ್ತಿರುವ ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧ
ಸವದತ್ತಿ ಯಲ್ಲಮ್ಮಗೆ ಜಲ ದಿಗ್ಭಂಧನ: ದೇಗುಲದಲ್ಲಿ ಪ್ರವಾಹದಂತೆ ಹರಿದ ನೀರು
ಸವದತ್ತಿ ಯಲ್ಲಮ್ಮಗೆ ಜಲ ದಿಗ್ಭಂಧನ: ದೇಗುಲದಲ್ಲಿ ಪ್ರವಾಹದಂತೆ ಹರಿದ ನೀರು
ಬಡವರಿಗೆ ನಿವೇಶನಗಳನ್ನು ಮಾಡಿ ಹಂಚಲು ಬೈಲಹೊಂಗಲದಲ್ಲಿ ಖರೀದಿಯಾಗಿದ್ದ ಜಮೀನು
ಬಡವರಿಗೆ ನಿವೇಶನಗಳನ್ನು ಮಾಡಿ ಹಂಚಲು ಬೈಲಹೊಂಗಲದಲ್ಲಿ ಖರೀದಿಯಾಗಿದ್ದ ಜಮೀನು
‘ಎಷ್ಟೇ ಎತ್ತರಕ್ಕೆ ಬೆಳೆದರೂ..’; ಯಶ್ ಸಹಾಯ ನೆನೆದ ಅಜಯ್ ರಾವ್
‘ಎಷ್ಟೇ ಎತ್ತರಕ್ಕೆ ಬೆಳೆದರೂ..’; ಯಶ್ ಸಹಾಯ ನೆನೆದ ಅಜಯ್ ರಾವ್
ಹಾಸನ: ಭಾರಿ ಮಳೆಗೆ ಸೋರುತಿಹುದು ರೈಲ್ವೆ ನಿಲ್ದಾಣ ಮಾಳಿಗಿ!
ಹಾಸನ: ಭಾರಿ ಮಳೆಗೆ ಸೋರುತಿಹುದು ರೈಲ್ವೆ ನಿಲ್ದಾಣ ಮಾಳಿಗಿ!
ಪೈಲಟ್​ ಸಿದ್ಧಾರ್ಥ್​ 10 ದಿನಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು
ಪೈಲಟ್​ ಸಿದ್ಧಾರ್ಥ್​ 10 ದಿನಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು
ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ
ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ
Daily Devotional: ಮಡಿಕೆಯಲ್ಲಿ ನೀರಿನ ಮಹತ್ವ ಹಾಗೂ ಅದರ ಹಿಂದಿನ ರಹಸ್ಯ
Daily Devotional: ಮಡಿಕೆಯಲ್ಲಿ ನೀರಿನ ಮಹತ್ವ ಹಾಗೂ ಅದರ ಹಿಂದಿನ ರಹಸ್ಯ