ಜೈಲಲ್ಲೂ ಬಿಂದಾಸ್​ ಆಗಿದ್ದ ಪ್ರಜ್ವಲ್​ ರೇವಣ್ಣಗೆ ಮತ್ತೊಂದು ಶಾಕ್, ಮಾಜಿ ಎಂಪಿ ಪೊಲೀಸ್ ಕಸ್ಟಡಿಗೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೂ ಕಲರ್​ಫುಲ್​ ಬಟ್ಟೆ ತೊಟ್ಟು, ಅಕ್ರಮವಾಗಿ ಮೊಬೈಲ್​ ಬಳಸುತ್ತಿದ್ದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣಗೆ ಇದೀಗ ಕೋರ್ಟ್​ ಬಿಗ್ ಶಾಕ್ ಕೊಟ್ಟಿದೆ. ಎರಡ್ಮೂರು ಪ್ರಕರಣಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣಗೆ ಇದೀಗ ಜೈಲಿನಲ್ಲಿ ಮೊಬೈಲ್ ಬಳಕೆ ಪ್ರಕಣ ಸಂಕಷ್ಟ ತಂದಿಟ್ಟಿದೆ.

ಜೈಲಲ್ಲೂ ಬಿಂದಾಸ್​ ಆಗಿದ್ದ ಪ್ರಜ್ವಲ್​ ರೇವಣ್ಣಗೆ ಮತ್ತೊಂದು ಶಾಕ್, ಮಾಜಿ ಎಂಪಿ ಪೊಲೀಸ್ ಕಸ್ಟಡಿಗೆ
Prajwal Revanna
Edited By:

Updated on: Sep 08, 2026 | 3:39 PM

ಬೆಂಗಳೂರು, (ಸೆಪ್ಟೆಂಬರ್ 08): ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಸಿಕ್ಕ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಕೋರ್ಟ್​, ಪ್ರಜ್ವಲ್ ರೇವಣ್ಣನನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಜೈಲಿನಲ್ಲಿ ಅಕ್ರಮವಾಗಿ ಮೊಬೈಲ್ ಬಳಸಿದ ಆರೋಪ ಸಂಬಂಧ ಪೊಲೀಸರು, ತನಿಖೆ ತೀವ್ರಗೊಳಿಸಿದ್ದು, ಮೊಬೈಲ್ ಹೇಗೆ ಬಂತು? ಯಾರದ್ದು ಎನ್ನುವುದನ್ನು ಪತ್ತೆ ಮಾಡಲು ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ನೀಡುವಂತೆ ಪೊಲೀಸರು ಕೋರ್ಟ್​​ಗೆ ಮನವಿ ಮಾಡಿದ್ದರು. ಇಂದು (ಸೆಪ್ಟೆಂಬರ್ 08) ಈ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42 ಎಸಿಜೆಎಂ ಕೋರ್ಟ್, ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ಇಬ್ಬರನ್ನ ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಪ್ರಕರಣದ ವಿವರ

ಆಗಸ್ಟ್ 11ರಂದು ಕೇಂದ್ರ ಅಪರಾಧ ವಿಭಾಗ ನಡೆಸಿದ ದಾಳಿಯಲ್ಲಿ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿತ್ತು. ಈ ಮೊಬೈಲ್‌ನಲ್ಲಿ ಫೇಸ್‌ಬುಕ್, ವಾಟ್ಸ್‌ಆ್ಯಪ್, ಇನ್‌ಸ್ಟಾಗ್ರಾಮ್, ನೆಟ್‌ಫ್ಲಿಕ್ಸ್ ಹಾಗೂ ಅಮೆಜಾನ್ ಪ್ರೈಮ್‌ನಂತಹ ಆಪ್‌ಗಳು ಇದ್ದವು. ಮನೆಯವರು ಹಾಗೂ ವಕೀಲರ ಜತೆ ಮಾತನಾಡಲು ಇದನ್ನು ಬಳಸುತ್ತಿದ್ದುದು ಬೆಳಕಿಗೆ ಬಂದಿತ್ತು.ಮೊಬೈಲ್ ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಮೋಡಿ: ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ!

ಇನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಕ್ರಮ ಬಳಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಪ್ರತಾಪ್ ಎಂಬಾತನನ್ನು ಮೊದಲ ಆರೋಪಿ (A1) ಹಾಗೂ ಪ್ರಜ್ವಲ್ ರೇವಣ್ಣ ಅವರನ್ನು ಎರಡನೇ ಆರೋಪಿ (A2) ಆಗಿದ್ದು, ಜೈಲಿನೊಳಗೆ ಮೊಬೈಲ್ ತಲುಪಿದ್ದು ಹೇಗೆ ಮತ್ತು ಯಾರ ಸಹಕಾರದೊಂದಿಗೆ ಸಂವಹನ ನಡೆಸಲಾಗುತ್ತಿತ್ತು ಎಂಬ ಕುರಿತು ಸತ್ಯಾಸತ್ಯತೆಯನ್ನು ಹೊರತರಲು ಇಬ್ಬರೂ ಆರೋಪಿಗಳನ್ನು ಕಸ್ಟಡಿಗೆ ಪಡೆದು ಮುಖಾಮುಖಿ ವಿಚಾರಣೆ ನಡೆಸಲು ತನಿಖಾ ತಂಡ ಸಿದ್ಧತೆ ಮಾಡಿಕೊಂಡಿದೆ.

ಹೀಗಾಗಿ ತನಿಖೆಯನ್ನು ಮುಂದುವರಿಸಲು ಆರೋಪಿಯಯನ್ನು ವಶಕ್ಕೆ ಪಡೆಯುತ್ತಿರುವುದು ಅತ್ಯಗತ್ಯವಾಗಿರುವ ಹಿನ್ನೆಲೆಯಲ್ಲಿ, ಪೊಲೀಸರು ಇಂದು (ಸೆಪ್ಟೆಂಬರ್ 08) ಪ್ರಜ್ವಲ್ ರೇವಣ್ಣನನ್ನ 42ನೇ ಎಸಿಎಂಎಂ (ACMM) ನ್ಯಾಯಾಲಯದ ಮುಂದೆ ಹಾಜರುಪಡಿಸಿ ಬಳಿಕ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Tue, 8 September 26

ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More
Loading...
Unable to load recommendations.
Follow Us