ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದ್ದ ಮೊಬೈಲ್ ಸೇವೆ ಸ್ಥಗಿತ, ಕಾರಣ ಏನು ಗೊತ್ತಾ?
ಮಕ್ಕಳು, ಬಾಣಂತಿ, ಗರ್ಭಿಣಿಯರ ಬಗ್ಗೆ ಮಾಹಿತಿ ಒದಗಿಸುವದು ಸೇರಿದಂತೆ ಅನೇಕ ಕೆಲಸಗಳಿಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ನೀಡಲಾಗಿತ್ತು. ಸದ್ಯ ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾದ ಮೊಬೈಲ್ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಅವರು ಆಕ್ರೋಶ ಹೊರಹಾಕುತ್ತಿದ್ದಾರೆ.
ಕೊಪ್ಪಳ, ನ.23: ಮಕ್ಕಳು, ಬಾಣಂತಿ, ಗರ್ಭಿಣಿಯರ ಬಗ್ಗೆ ಮಾಹಿತಿ ಒದಗಿಸುವದು ಸೇರಿದಂತೆ ಅನೇಕ ಕೆಲಸಗಳಿಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ (Anganavadi Workers) ಮೊಬೈಲ್ ನೀಡಲಾಗಿತ್ತು. ಸದ್ಯ ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾದ ಮೊಬೈಲ್ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಅವರು ಆಕ್ರೋಶ ಹೊರಹಾಕುತ್ತಿದ್ದಾರೆ.
ಕೊಪ್ಪಳ ಜಿಲ್ಲೆಯ 1,850 ಕಾರ್ಯಕರ್ತೆಯರು ಸೇರಿ ರಾಜ್ಯದ 65 ಸಾವಿರ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ ಯೋಜನೆಯಡಿ 2018-19 ರಲ್ಲಿ ಮೊಬೈಲ್ ನೀಡಲಾಗಿತ್ತು. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಕಳೆದ ಮೂರು ತಿಂಗಳಿಂದ ರಿಚಾರ್ಜ್ ಮಾಡದ ಹಿನ್ನೆಲೆಯಲ್ಲಿ ಅವುಗಳು ಕಾರ್ಯನಿರ್ವಹಿಸುತ್ತಿಲ್ಲ.
ಇಲಾಖೆಯ ನಿರ್ಲಕ್ಷ್ಯದಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು ಮೊಬೈಲ್ ಮೂಲಕ ಸರ್ಕಾರಕ್ಕೆ ಮಾಹಿತಿ ರವಾನಿಸಲು ಪರದಾಡುವಂತಾಗಿದೆ. ಅನೇಕರು ಅವರಿವರಿಂದ ವೈಪ್ ಪಡೆದು ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ತಮ್ಮದೇ ಇನ್ನೋಂದು ಸಿಮ್ಗೆ ಡೇಟಾ ಹಾಕಿಸಿಕೊಂಡು ವೈಪೈ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಸಿಡಿದೆದ್ದ ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರು, ರಾಜ್ಯ ಸರ್ಕಾರಕ್ಕೆ ಡಬಲ್ ಟ್ರಬಲ್…!
ಮೊದಲೇ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದೇವೆ, ಇದೀಗ ಡೇಟಾ ರಿಚಾರ್ಜ್ ಹೊರೆ ಕೂಡಾ ಬೀಳುತ್ತಿದೆ ಎಂದು ಕಾರ್ಯಕರ್ತೆಯರು ಅಳಲುತೋಡಿಕೊಳ್ಳುತ್ತಿದ್ದಾರೆ. ಮಕ್ಕಳು, ಬಾಣಂತಿ, ಗರ್ಭಿಣಿಯರ ಬಗ್ಗೆ ಮಾಹಿತಿ ಒದಗಿಸುವದು ಸೇರಿದಂತೆ ಅನೇಕ ಕೆಲಸಗಳಿಗಾಗಿ ಮೊಬೈಲ್ ನೀಡಲಾಗಿತ್ತು. ಪ್ರತಿನಿತ್ಯ ಇದೇ ಮೊಬೈಲ್ ಮೂಲಕ ಕಾರ್ಯಕರ್ತೆಯರು ಇಲಾಖೆಗೆ ಮಾಹಿತಿ ರವಾನಿಸುತ್ತಿದ್ದರು.
ಇಲಾಖೆ ಅಧಿಕಾರಿಗಳು ರಿಚಾರ್ಜ್ ಮಾಡಿಸದೇ ಇದ್ದರೂ ಮಾಹಿತಿ ಕೇಳುವುದನ್ನು ಮಾತ್ರ ಬಿಟ್ಟಿಲ್ಲ. ಹೀಗಾಗಿ ಪ್ರತಿನಿತ್ಯ ಮಾಹಿತಿ ಅಪಲೋಡ್ ಮಾಡಲು ಅಂಗನವಾಡಿ ಕಾರ್ಯಕರ್ತೆಯರು ಹರಸಾಹಸ ಮಾಡುತ್ತಿದ್ದಾರೆ. ರೀಚಾರ್ಜ್ ಬಗ್ಗೆ ಕೇಳಿದರೆ ಕೇಂದ್ರ ಸರ್ಕಾರದ ಯೋಜನೆ, ಕೇಂದ್ರದಿಂದ ಹಣ ಬಂದಿಲ್ಲಾ ಅಂತ ರಾಜ್ಯ ಸರ್ಕಾರ ಹೇಳುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:45 am, Thu, 23 November 23