ಬಿಬಿಎಂಪಿ ವತಿಯಿಂದ ಕೋವಿಡ್ ಸಂಚಾರಿ ಪರೀಕ್ಷಾ ಘಟಕಕ್ಕೆ ಇಂದು ಹಸಿರು ನಿಶಾನೆ

ಝೆರೋಧ, ಮಂತ್ರ ಫಾರ್ ಚೇಮಜ್ ಮತ್ತು ಸೂರ್ಯ ಫೌಂಡೇಶನ್ ವತಿಯಿಂದ ಬಿಬಿಎಂಪಿಯ ದಕ್ಷಿಣ ವಲಯಕ್ಕೆ ಕೋವಿಡ್ ಪರೀಕ್ಷಾ ಮೊಬೈಲ್ ಯೂನಿಟ್​ಗಳನ್ನು ನೀಡಲಾಗಿದ್ದು, ಇಂದು ಹಸಿರು ನಿಶಾನೆ ಮಾಡಲಾಯಿತು. ಎಂ.ಟಿ.ಯು ದಕ್ಷಿಣ ವಲಯದ ವಾರ್ ರೂಮ್​ಗೆ ಮೊಬೈಲ್ ಚಿಕಿತ್ಸೆಯ ಸರದಿ ನಿರ್ಧಾರ ಘಟಕದೊಂದಿಗೆ ಸಂಪರ್ಕ ಹೊಂದಿದೆ ಮತ್ತು 24/7 ಕಾರ್ಯನಿರ್ವಹಿಸಲಿದೆ.

ಬಿಬಿಎಂಪಿ ವತಿಯಿಂದ ಕೋವಿಡ್ ಸಂಚಾರಿ ಪರೀಕ್ಷಾ ಘಟಕಕ್ಕೆ ಇಂದು ಹಸಿರು ನಿಶಾನೆ
ಬಿಬಿಎಂಪಿ ವತಿಯಿಂದ ಕೋವಿಡ್ ಸಂಚಾರಿ ಪರೀಕ್ಷಾ ಘಟಕಕ್ಕೆ ಇಂದು ಹಸಿರು ನಿಶಾನೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jan 20, 2022 | 11:35 AM

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಗಾಗಿ ಸೋಂಕು ಹರಡುವಿಕೆ ತಡೆಯಲು ಬಿಬಿಎಂಪಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೋವಿಡ್ ಪರೀಕ್ಷೆಗೆ ಮೊಬೈಲ್ ಯೂನಿಟ್‌ಗಳನ್ನು ಪರಿಚಯಿಸಿದೆ. ವಾರದ ಎಲ್ಲಾ ದಿನವೂ 24 ಗಂಟೆ ಈ ಮೊಬೈಲ್ ಯೂನಿಟ್ ಕಾರ್ಯ ನಿರ್ವಹಣೆ ಮಾಡಲಿದೆ. ಝೆರೋಧ, ಮಂತ್ರ ಫಾರ್ ಚೇಮಜ್ ಮತ್ತು ಸೂರ್ಯ ಫೌಂಡೇಶನ್ ವತಿಯಿಂದ ಬಿಬಿಎಂಪಿಯ ದಕ್ಷಿಣ ವಲಯಕ್ಕೆ ಕೋವಿಡ್ ಪರೀಕ್ಷಾ ಮೊಬೈಲ್ ಯೂನಿಟ್​ಗಳನ್ನು ನೀಡಲಾಗಿದ್ದು, ಇಂದು ಹಸಿರು ನಿಶಾನೆ ನೀಡಲಾಯಿತು. ಎಂ.ಟಿ.ಯು ದಕ್ಷಿಣ ವಲಯದ ವಾರ್ ರೂಮ್​ಗೆ ಮೊಬೈಲ್ ಚಿಕಿತ್ಸೆಯ ಸರದಿ ನಿರ್ಧಾರ ಘಟಕದೊಂದಿಗೆ ಸಂಪರ್ಕ ಹೊಂದಿದೆ ಮತ್ತು 24/7 ಕಾರ್ಯನಿರ್ವಹಿಸಲಿದೆ.

ಈ ಕುರಿತು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಮಾಹಿತಿ ನೀಡಿದ್ದು, “ಜನರು ಈಗ ಬಿಬಿಎಂಪಿ ದಕ್ಷಿಣ ವಲಯದ ಸಹಾಯವಾಣಿಗೆ ಕರೆ ಮಾಡುವ ಮೂಲಕ ತಮ್ಮ ಮನೆ ಬಾಗಿಲಲ್ಲಿಯೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬಹುದು” ಎಂದರು. ಸಂಚಾರಿ ಪರೀಕ್ಷಾ ಘಟಕ (ಎಂಟಿಯು) ವಾರದ ಎಲ್ಲಾ ದಿನ 24*7 ಕಾರ್ಯ ನಿರ್ವಹಣೆ ಮಾಡುತ್ತದೆ. ಆಂಟಿಜೆಟ್ ಟೆಸ್ಟ್​ನ್ನು ಇದರಲ್ಲಿ ಮಾಡಲಾಗುತ್ತದೆ. ತಕ್ಷಣವೇ ಫಲಿತಾಂಶ ಪ್ರಕಟವಾಗಲಿದ್ದು, ಪರೀಕ್ಷೆ ನಡೆಸಿದ ವ್ಯಕ್ತಿಗೆ ಕೋವಿಡ್ ಸೋಂಕು ಖಚಿತವಾದರೆ ಮುಂದಿನ ಕ್ರಮದ ಬಗ್ಗೆ ಬಿಬಿಎಂಪಿ ಮಾಹಿತಿ ನೀಡಲಿದೆ. ಈ ಮೊಬೈಲ್ ಯೂನಿಟ್‌ಗೆ ಸಿಗುವ ಪ್ರತಿಕ್ರಿಯೆ ನೋಡಿಕೊಂಡು ಉಳಿದ ವಲಯಗಳಲ್ಲಿಯೂ ಇದನ್ನು ವಿಸ್ತರಣೆ ಮಾಡಲು ಬಿಬಿಎಂಪಿ ನಿರ್ಧರಿಸಿದೆ.

ಇನ್ನೂ ಕೋವಿಡ್ ಪರೀಕ್ಷೆ ಮಾಡುವ ಕ್ಯಾಂಪ್ ಕೂಡ ಮಲ್ಲೇಶ್ವರಂ ಬಸ್ ನಿಲ್ದಾಣದ ಸಮೀಪ ಸ್ಥಾಪನೆ ಮಾಡಲಾಗಿದೆ. ಬೆಳಗ್ಗೆ 8 ರಿಂದ ಸಂಜೆ 8 ಗಂಟೆಯ ತನಕ ಈ ಕ್ಯಾಂಪ್ ಕಾರ್ಯ ನಿರ್ವಹಿಸಲಿದೆ. ಜನರು ಕ್ಯಾಂಪ್‌ಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಬಹುದು” ಎಂದು ಮಲ್ಲೇಶ್ವರಂ ಶಾಸಕ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿದರು. ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ 40,499 ಹೊಸ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 24,135 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ನಗರದ ಒಟ್ಟು ಸಕ್ರಿಯ ಪ್ರಕರಣಗಳು 1,84,377.

ಶುಕ್ರವಾರ ಸಭೆ: ರಾಜ್ಯದಲ್ಲಿ ನೈಟ್ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಹತ್ವದ ಸಭೆ ನಡೆಸಲಿದ್ದಾರೆ. ಬೆಂಗಳೂರು ನಗರದಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಬೇಕು ಎಂದು ಹೋಟೆಲ್ ಮಾಲೀಕರು ಒತ್ತಾಯಿಸಿದ್ದಾರೆ. ಶುಕ್ರವಾರದ ಸಭೆಯಲ್ಲಿ ಈ ಕುರಿತು ವಿವರವಾದ ಚರ್ಚೆ ನಡೆಯಲಿದ್ದು, ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಬೆಂಗಳೂರು ನಗರಲ್ಲಿ 1 ರಿಂದ 9ನೇ ತರಗತಿಗಳನ್ನು ಬಂದ್ ಮಾಡಲಾಗಿದೆ. ಭೌತಿಕ ತರಗತಿ ಸ್ಥಗಿತಗೊಳಿಸಿ ಆನ್‌ಲೈನ್ ಕ್ಲಾಸ್ ಮಾಡಲಾಗುತ್ತಿದೆ. ಜನವರಿ 31ರ ತನಕ ಶಾಲೆಗಳು ಬಂದ್ ಆಗುವ ಸಾಧ್ಯತೆ ಇದೆ.

ಇದನ್ನು ಓದಿ: 

ಆ್ಯಂಟಿ ಬಯೋಟಿಕ್​ ಪ್ರತಿರೋಧಕ ಸೋಂಕುಗಳಿಂದ 2019ರಲ್ಲಿ 12 ಲಕ್ಷ ಮಂದಿ ಸಾವು; ಔಷಧಕ್ಕೂ ಬಗ್ಗದ ಸೂಪರ್​ಬಗ್ಸ್​ಗಳ ಅಪಾಯ ತೆರೆದಿಟ್ಟ ಅಧ್ಯಯನ !

COVID-19: 10 ದಿನದ ಕ್ವಾರಂಟೈನ್​ ಬಳಿಕವೂ ಹತ್ತರಲ್ಲಿ ಒಬ್ಬರಿಗೆ ಕೊರೋನಾ ಸೋಂಕಿನ ವರದಿ ಪಾಸಿಟಿವ್​ ಬರಲಿದೆ: ಅಧ್ಯಯನ

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್