Karnataka Rain: ಕರಾವಳಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

|

Updated on: Dec 02, 2023 | 7:21 AM

ಡಿಸೆಂಬರ್​ 7ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಡಿಸೆಂಬರ್​ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಕರಾವಳಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಮಳೆ
Image Credit source: The Economic Times
Follow us on

ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಡಿಸೆಂಬರ್​ 7ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್​ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಬೀದರ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ಇದನ್ನೂ ಓದಿ: Karnataka Dam Water Level: ಡಿ.02ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ತಮಿಳುನಾಡು, ಪಾಂಡಿಚೇರಿ, ಆಂದ್ರಪ್ರದೇಶ, ಓಡಿಸ್ಸಾ ರಾಜ್ಯಗಳ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ