Karnataka Rain: ಬೆಂಗಳೂರು ಸೇರಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆ

ಬೆಂಗಳೂರು ಸೇರಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rain: ಬೆಂಗಳೂರು ಸೇರಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆ
ಮಳೆImage Credit source: Udayavani
Follow us
ನಯನಾ ರಾಜೀವ್
|

Updated on: Nov 29, 2023 | 7:23 AM

ಬೆಂಗಳೂರು ಸೇರಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ, ಕರಾವಳಿಯಲ್ಲಿ ಒಣಹವೆ ಇತ್ತು. ಚಾಮರಾಜನಗರದಲ್ಲಿ 17.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಕೆಲವೆಡೆ ಮಂಗಳವಾರ ತುಂತುರು ಮಳೆಯಾಗಿದೆ. ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನವೆಂಬರ್ 29ರವರೆಗೆ ಮಳೆ

ದೆಹಲಿ-ಎನ್‌ಸಿಆರ್‌ನಲ್ಲಿ ಮಳೆಯ ನಂತರ ಚಳಿ ಹೆಚ್ಚಾಗಿದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ದೆಹಲಿಯಲ್ಲಿ ತುಂತುರು ಮಳೆ ಮುಂದುವರಿಯುತ್ತದೆ. ಮಳೆಯಿಂದಾಗಿ ರಾಜಧಾನಿಯ ತಾಪಮಾನ 4 ಡಿಗ್ರಿಗಳಷ್ಟು ಕುಸಿದಿದೆ. ಭಾರತ ಹವಾಮಾನ ಇಲಾಖೆ (IMD) ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪೂರ್ವ ಮತ್ತು ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಸೇರಿದಂತೆ ದೇಶದಾದ್ಯಂತ ಹಲವು ಭಾಗಗಳಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಿದೆ. ಮುಂದಿನ ಐದು ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಬುಧವಾರ ಬೆಳಿಗ್ಗೆ ದಟ್ಟವಾದ ಮಂಜು ಕವಿದಿತ್ತು. ಸಿಕ್ಕಿಂ ಮತ್ತು ಉಪ ಹಿಮಾಲಯದ ಪಶ್ಚಿಮ ಬಂಗಾಳದಲ್ಲಿ ಒಣಹವೆ ಇರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ