AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಗುಡ್ ನ್ಯೂಸ್; ಬಳ್ಳಾರಿ- ಹೊಸಪೇಟೆ ನಡುವೆ ಹೊಸ ರೈಲು ಮಾರ್ಗಕ್ಕೆ ಒಪ್ಪಿಗೆ

ಕರ್ನಾಟಕದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೆ ಮೋದಿ ಸರ್ಕಾರ ಒಳ್ಳೆಯ ಸುದ್ದಿಯೊಂದನ್ನು ನೀಡಿದೆ. ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ವಿಶ್ವ ಪಾರಂಪರಿಕ ತಾಣವಾದ ಹಂಪಿಗೆ ರೈಲು ಸಂಪರ್ಕ ಕಲ್ಪಿಸಲು ಬಳ್ಳಾರಿ-ಹೊಸಪೇಟೆ 3ನೇ ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಒಟ್ಟು 3 ರೈಲು ಮಾರ್ಗಗಳಿಗೆ ಒಪ್ಪಿಗೆ ನೀಡಲಾಗಿದ್ದು, ಬಳ್ಳಾರಿ ಮಾರ್ಗವನ್ನು ಹೊರತುಪಡಿಸಿ ಕಾಸಾರ-ಮನ್ಮಾಡ್, ದೆಹಲಿ-ಅಂಬಾಲ ನಡುವಿನ 3 ಬಹು-ಟ್ರ್ಯಾಕಿಂಗ್ ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದೆ. ಒಟ್ಟು 18,509 ಕೋಟಿ ರೂ. ಮೌಲ್ಯದ ರೈಲು ಮಾರ್ಗಗಳ ನವೀಕರಣಕ್ಕೆ ಮೋದಿ ಸರ್ಕಾರ ಮುಂದಾಗಿದೆ.

ಕರ್ನಾಟಕಕ್ಕೆ ಗುಡ್ ನ್ಯೂಸ್; ಬಳ್ಳಾರಿ- ಹೊಸಪೇಟೆ ನಡುವೆ ಹೊಸ ರೈಲು ಮಾರ್ಗಕ್ಕೆ ಒಪ್ಪಿಗೆ
Ashwini Vaishnaw
ಸುಷ್ಮಾ ಚಕ್ರೆ
|

Updated on: Feb 14, 2026 | 7:37 PM

Share

ಬೆಂಗಳೂರು, ಫೆಬ್ರವರಿ 14: ಉತ್ತರ ಕರ್ನಾಟಕ ಭಾಗದ ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾದ ಹಂಪಿಗೆ ಹೋಗುವ ಪ್ರಯಾಣಿಕರಿಗೆ ರೈಲು ಸಂಚಾರ ಇನ್ಮುಂದೆ ಬಹಳ ಆರಾಮದಾಯಕವಾಗಲಿದೆ. ಏಕೆಂದರೆ, ಮೋದಿ ಸರ್ಕಾರ ಬಳ್ಳಾರಿ- ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ. ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಹೊಸ ರೈಲು ಮಾರ್ಗ ಹಂಪಿ (ಯುನೆಸ್ಕೋ ವಿಶ್ವ ಪರಂಪರೆಯ ತಾಣ), ಬಳ್ಳಾರಿ ಕೋಟೆ, ದರೋಜಿ ಕರಡಿ ಧಾಮ, ತುಂಗಭದ್ರಾ ಅಣೆಕಟ್ಟು, ಕೆಂಚನಗುಡ್ಡ, ವಿಜಯ ವಿಠಲ ದೇವಾಲಯ, ಇತ್ಯಾದಿ ಪ್ರಮುಖ ಪ್ರವಾಸಿ ತಾಣಗಳ ಸಂಪರ್ಕವನ್ನು ಸುಧಾರಿಸುತ್ತದೆ. ಅಲ್ಲದೆ, ಕಬ್ಬಿಣದ ಅದಿರು ಸಮೃದ್ಧ ಬಳ್ಳಾರಿ ಪ್ರದೇಶಕ್ಕೆ ಸಂಪರ್ಕವನ್ನು ಉತ್ತಮಗೊಳಿಸುತ್ತದೆ. ವಾರ್ಷಿಕ 25 ಮಿಲಿಯನ್ ಟನ್ ಹೆಚ್ಚುವರಿ ಸರಕು ಸಾಗಣೆಗೆ ಅನುಕೂಲ ಮಾಡಿಕೊಡುತ್ತದೆ. ಈ ಯೋಜನೆಯಿಂದ ಪ್ರತಿ ವರ್ಷ 323 ಕೋಟಿ ಲಾಜಿಸ್ಟಿಕ್ಸ್ ವೆಚ್ಚ ಉಳಿತಾಯವಾಗಲಿದೆ.

ಇದನ್ನೂ ಓದಿ: ಮಹಾರಾಷ್ಟ್ರದ ನಾಂದೇಡ್​ ಮತ್ತು ಬೀದರ್ ನಡುವಿನ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲು!

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ರೈಲ್ವೆ ಸಚಿವಾಲಯದ ಸುಮಾರು 18,509 ಕೋಟಿ ರೂ. ವೆಚ್ಚದ ಮೂರು ಯೋಜನೆಗಳನ್ನು ಅನುಮೋದಿಸಿದೆ. ಈ ಯೋಜನೆಗಳಲ್ಲಿ ಕಸರಾ-ಮನ್ಮಾಡ್, ದೆಹಲಿ-ಅಂಬಾಲ ಮತ್ತು ಬಳ್ಳಾರಿ-ಹೊಸಪೇಟೆ ನಡುವಿನ ಮೂರನೇ ಮತ್ತು ನಾಲ್ಕನೇ ಮಾರ್ಗಗಳ ನಿರ್ಮಾಣವೂ ಸೇರಿದೆ.

65 ಕಿ.ಮೀ ಉದ್ದದ ಬಳ್ಳಾರಿ-ಹೊಸಪೇಟೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗ ಯೋಜನೆಯು 34 ಪ್ರಮುಖ ಸೇತುವೆಗಳು ಮತ್ತು 220 ಸಣ್ಣ ಸೇತುವೆಗಳನ್ನು ಒಳಗೊಂಡಿರುತ್ತದೆ. ಇದರ ಜೊತೆಗೆ, ಈ ಯೋಜನೆಯು 11 ರಸ್ತೆ ಓವರ್ ಬ್ರಿಡ್ಜ್‌ಗಳು (ROBಗಳು) ಮತ್ತು 14 ರಸ್ತೆ ಕೆಳ ಸೇತುವೆಗಳನ್ನು (RUBಗಳು) ಒಳಗೊಂಡಿರುತ್ತದೆ. ಈ ಯೋಜನೆಯ ಒಟ್ಟು ಹಳಿಗಳ ಉದ್ದ 149 ಕಿ.ಮೀ. ಬಳ್ಳಾರಿ-ಹೊಸಪೇಟೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗ ಯೋಜನೆಯನ್ನು 4 ವರ್ಷಗಳಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಯೋಜನೆಯು ರೈಲು ಸಾಮರ್ಥ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ಮೂಲಕ ಕರ್ನಾಟಕದ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಭಾರೀ ಪ್ರಯೋಜನ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: RailOne app : ರೈಲು ಪ್ರಯಾಣಿಕರೇ ಗಮನಿಸಿ; ಹಲವು ಆ್ಯಪ್​ಗಳ ಬದಲು ಈ ಒಂದೇ ಆ್ಯಪ್​ನಲ್ಲಿ ಸಿಗಲಿದೆ ಎಲ್ಲ ರೈಲ್ವೆ ಸೇವೆ

ದೆಹಲಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕರ್ನಾಟಕದಾದ್ಯಂತ 12 ಜಿಲ್ಲೆಗಳನ್ನು ವ್ಯಾಪಿಸಿರುವ 3 ಪ್ರಮುಖ ಬಹು-ಪಥ ನಿರ್ಮಾಣ ರೈಲ್ವೆ ಯೋಜನೆಗಳಿಗೆ ಒಟ್ಟು 18,509 ಕೋಟಿ ರೂ. ಹೂಡಿಕೆಯ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳನ್ನು ಪ್ರಧಾನ ಮಂತ್ರಿ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಯೋಜಿಸಲಾಗಿದೆ. ಈ ಯೋಜನೆಗಳು ಅಸ್ತಿತ್ವದಲ್ಲಿರುವ ರೈಲು ಜಾಲಕ್ಕೆ ಸುಮಾರು 389 ಕಿ.ಮೀ.ಗಳನ್ನು ಸೇರಿಸುತ್ತವೆ.

ಈ ರೈಲು ಮಾರ್ಗ ವಿಸ್ತರಣೆಯು ಸುಮಾರು 3,902 ಹಳ್ಳಿಗಳಿಗೆ ರೈಲು ಸಂಪರ್ಕವನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದು ಸುಮಾರು 97 ಲಕ್ಷ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಹಾಗೇ, ಉತ್ತಮ ಸಂಪರ್ಕವು ಒಳಗೊಂಡಿರುವ ಪ್ರದೇಶಗಳಲ್ಲಿ ಹೊಸ ಉದ್ಯೋಗ ಮತ್ತು ಸ್ವ-ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?