AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಸರ್ಕಾರಿ ಬಸ್​ ಮಾತ್ರವಲ್ಲ ಖಾಸಗಿ ಬಸ್​ ಕೂಡ ರಸ್ತೆಗಿಳಿಯಲ್ಲ!

ಸರ್ಕಾರಿ ಬಸ್​ಗಳಿಲ್ಲದಿದ್ದರೆ ಖಾಸಗಿ ಬಸ್​ನಲ್ಲಿ ಓಡಾಡಬಹುದು ಎಂದು ಅನೇಕರು ಅಂದುಕೊಂಡಿದ್ದರು. ಆದರೆ, ಅವರಿಗೂ ಈಗ ನಟರಾಜ್​ ಶಾಕ್​ ನೀಡಿದ್ದಾರೆ. ನಾಳೆ ಯಾವುದೇ ಖಾಸಗಿ ಬಸ್​ ರಸ್ತೆಗೆ ಇಳಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನಾಳೆ ಸರ್ಕಾರಿ ಬಸ್​ ಮಾತ್ರವಲ್ಲ ಖಾಸಗಿ ಬಸ್​ ಕೂಡ ರಸ್ತೆಗಿಳಿಯಲ್ಲ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Dec 13, 2020 | 8:51 PM

Share

ಬೆಂಗಳೂರು: ಖಾಸಗಿ ಬಸ್​ ಮಾಲೀಕರ ಸಂಘವು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಸೋಮವಾರ (ಡಿ.14) ಖಾಸಗಿ ಬಸ್​ಗಳ ಸಂಚಾರವೂ ರಾಜ್ಯದಲ್ಲಿ ಸ್ತಬ್ಧವಾಗಲಿದೆ.

ಫ್ರೀಡಂಪಾರ್ಕ್​ನಲ್ಲಿ ಖಾಸಗಿ ಬಸ್​ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಖಾಸಗಿ ಬಸ್​ ಓಡಾಟ ಬಂದ್​ ಮಾಡುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಹೋರಾಟಗಳು ಬ್ರೋಕರ್​ಗಳ ಕೈಯಲ್ಲಿ ಇರಬಾರದು. ನಾನು ಬಿಜೆಪಿಯವನಾಗಿ ಈ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದೇನೆ. ಇದು ಸಾರಿಗೆ ಸಚಿವ ಸವದಿಯವರ ವೈಫಲ್ಯ. ನಾವು ಕೊಟ್ಟಿದ್ದ ಹಲವಾರು ಮನವಿಗಳು ಕಸದ ಬುಟ್ಟಿಯಲ್ಲಿವೆ. ಪೊಳ್ಳು ಭರವಸೆಗಳಿಗೆ ಯಾರೂ ಕೂಡ ಬಗ್ಗಬೇಡಿ ಎಂದು ನೌಕರರ ಬಳಿ ಕೋರಿದ್ದಾರೆ.

ಸರ್ಕಾರಿ ಬಸ್​ಗಳಿಲ್ಲದಿದ್ದರೆ ಖಾಸಗಿ ಬಸ್​ನಲ್ಲಿ ಓಡಾಡಬಹುದು ಎಂದು ಅನೇಕರು ಅಂದುಕೊಂಡಿದ್ದರು. ಆದರೆ, ಅವರಿಗೂ ಈಗ ನಟರಾಜ್​ ಶಾಕ್​ ನೀಡಿದ್ದಾರೆ. ನಾಳೆ ಯಾವುದೇ ಖಾಸಗಿ ಬಸ್​ ರಸ್ತೆಗೆ ಇಳಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಾರಿಗೆ ನೌಕರರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

ಉಲ್ಟಾ ಹೊಡೆದಿದ್ದ ಚಂದ್ರು ವಿಕಾಸಸೌಧದಲ್ಲಿ ಇಂದು KSRTC ಸಂಘದ ರಾಜ್ಯಾಧ್ಯಕ್ಷ ಚಂದ್ರು ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೇರಿ ಅನೇಕರು ಸಂಧಾನ ಮಾತುಕತೆ ನಡೆಸಿದ್ದರು. ಮಾತುಕತೆ ಮುಗಿಸಿ ಹೊರ ಬಂದ ನಂತರ ಮಾತನಾಡಿದ್ದ ಚಂದ್ರು, ಸಂಧಾನ ಯಶಸ್ವಿ ಆಗಿದೆ ಎಂದು ಹೇಳಿದ್ದರು. ಆದರೆ, ಫ್ರೀಂಡಂ ಪಾರ್ಕ್​ ಬಂದ ನಂತರದಲ್ಲಿ ಚಂದ್ರು ಉಲ್ಟಾ ಹೊಡೆದಿದ್ದರು. ಸರ್ಕಾರದ ಜತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಬೇಕಿದೆ. ಈಗಿನ ಮಾತುಕತೆ ವಿಫಲವಾಗಿದೆ. ಹೀಗಾಗಿ, ಯಾರೂ ಬಸ್​ ತೆಗೆಯಬಾರದು ಎಂದು ಕೋರಿದ್ದರು.

ಮುಷ್ಕರ ಮುಂದುವರಿಯಲಿದೆ, ಯಾರೂ ಬಸ್​ ತೆಗೆಯಬೇಡಿ -ಸರ್ಕಾರಕ್ಕೆ ಮತ್ತೆ ಶಾಕ್​ ಕೊಟ್ಟ ಸಾರಿಗೆ ನೌಕರರು

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್