Breaking ಕೆ‌ಪಿಸಿಸಿ ಅಧ್ಯಕ್ಷ ಡಿಕೆ‌ ಶಿವಕುಮಾರ್​​ಗೆ ಜಾಮೀನು ವಿಸ್ತರಣೆ

| Updated By: ರಶ್ಮಿ ಕಲ್ಲಕಟ್ಟ

Updated on: Aug 02, 2022 | 3:50 PM

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಡಿಕೆಶಿ ಅವರಿಗೆ ಜಾಮೀನು ವಿಸ್ತರಣೆ ಮಾಡಿದೆ

Breaking ಕೆ‌ಪಿಸಿಸಿ ಅಧ್ಯಕ್ಷ ಡಿಕೆ‌ ಶಿವಕುಮಾರ್​​ಗೆ ಜಾಮೀನು ವಿಸ್ತರಣೆ
ಡಿಕೆ ಶಿವಕುಮಾರ
Follow us on

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering case) ದೆಹಲಿಯ ಪಿಎಂಎಲ್ಎ(PMLA) ವಿಶೇಷ ನ್ಯಾಯಾಲಯ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DKShivakumar) ಅವರ ಜಾಮೀನು ವಿಸ್ತರಣೆ ಮಾಡಿದೆ. ಇತ್ತೀಚೆಗೆ ಜಾರಿ ನಿರ್ದೇಶನಾಲಯ  ಡಿಕೆಶಿ ಮತ್ತು ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು. ಸಾಕ್ಷ್ಯಗಳನ್ನು ತಿರುಚುವಂತಿಲ್ಲ, ದೇಶದಿಂದ ಹೊರಗೆ ಹೋಗುವಂತೆ ಇಲ್ಲ, 1 ಲಕ್ಷ ಶ್ಯೂರಿಟಿ ಈ ಮೂರು ಷರತ್ತುಗಳೊಂದಿಗೆ ಜಾಮೀನು ವಿಸ್ತರಣೆ ಮಾಡಲಾಗಿದೆ. ನ್ಯಾ ವಿಕಾಸ್ ಧುಲ್ ನ್ಯಾಯಪೀಠ ಈ ಆದೇಶ ನೀಡಿದ್ದು , ಇತರ ಆರೋಪಿಗಳಾದ ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ, ಸುನಿಲ್ ಶರ್ಮ ಮತ್ತು ರಾಜೇಂದ್ರ ಅವರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ಪ್ರಕರಣದ ತನಿಖೆ ನಡೆಸಿದ್ದ ಇಡಿ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್ ಸಲ್ಲಿಸಿತ್ತು. ಈ ಹಿನ್ನಲೆ ಡಿ.ಕೆ ಶಿವಕುಮಾರ್ ತಮ್ಮ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಿಗೆ ಪರಿಗಣಿಸಲು ಮನವಿ ಮಾಡಿದ್ದರು. ಅದೇ ವೇಳೆ ಪ್ರಕರಣದ ಇತರೆ ಆರೋಪಿಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ಕಳೆದ ಶನಿವಾರ ಈ ಎಲ್ಲ ಅರ್ಜಿಗಳನ್ನು ನ್ಯಾ ವಿಕಾಸ್ ದುಲ್ ವಿಚಾರಣೆ ನಡೆಸಿದ್ದು, ಇತರ ಆರೋಪಿಗಳಿಗೆ ಜಾಮೀನು ನೀಡದಂತೆ ಇಡಿ ಪರ ವಕೀಲರು ಮನವಿ ಮಾಡಿದ್ದರು. ಇತರೆ ನಾಲ್ಕು ಆರೋಪಿಗಳ ಪರ ವಾದ ಮಂಡಿಸಿದ ವಕೀಲರು ಇಡಿ ಜಾಮೀನು ನೀಡಲು ವಿರೋಧಿಸುವುದಕ್ಕೆ ಅರ್ಥವಿಲ್ಲ.

ಯಾವ ಆಧಾರದಲ್ಲಿ ಇಡಿ ಜಾಮೀನು ವಿರೋಧಿಸುತ್ತಿದೆಯೋ ಗೊತ್ತಿಲ್ಲ. ಎಲ್ಲ ಅಂಶಗಳು ಮೇಲ್ಮಟ್ಟದ ನ್ಯಾಯಾಲಯಗಳಲ್ಲಿ ಚರ್ಚೆಯಾಗಿದೆ. ಹಲವು ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದ ಹಲವು ಉದಾಹರಣೆಗಳು ಇವೆ. ಇಡಿಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಇನ್ನು ಆರೋಪಿಗಳನ್ನ ಬಂಧಿಸುವ ಅಗತ್ಯವೇ ಬರುವುದಿಲ್ಲ. ಇಡಿ ತನಿಖೆಯ ವೇಳೆ ಆರೋಪಿಗಳನ್ನು ಬಂಧಿಸಿಲ್ಲ. ಹೀಗಾಗಿ ಜಾರ್ಜ್ ಶೀಟ್ ಸಲ್ಲಿಕೆ ಬಳಿಕ ಜಾಮೀನು ಪಡೆಯಲು ವಿರೋಧಿಸುವಂತಿಲ್ಲ ಎಂದು ವಾದಿಸಿತ್ತು.

Published On - 3:28 pm, Tue, 2 August 22