ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್ಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್
Money laundring case agsinst DK Shivakumar: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ದೇಶದ ಸರ್ವೋಚ್ಚ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ಶಿವಕುಮಾರ್ ವಿರುದ್ಧ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ನವದೆಹಲಿ, ಮಾರ್ಚ್ 5: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ಗೆ (DK Shivakumar) ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಬಿಗ್ ರಿಲೀಫ್ ನೀಡಿದೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) 120B (ಕ್ರಿಮಿನಲ್ ಪಿತೂರಿ) ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಇದರಿಂದಾಗಿ ಇದೀಗ ಡಿಕೆ ಶಿವಕುಮಾರ್ ಜಾರಿ ನಿರ್ದೇಶನಾಲಯದ ತನಿಖೆಯಿಂದ ನಿರಾಳರಾಗುವಂತಾಗಿದೆ.
ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
ಹೈಕೋರ್ಟ್ ನೀಡಿದ್ದ ತೀರ್ಪಿನಲ್ಲೇನಿತ್ತು? ಸುಪ್ರೀಂ ಹೇಳಿದ್ದೇನು?
ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ 2019ರ ಆಗಸ್ಟ್ನಲ್ಲಿ ಹೈಕೋರ್ಟ್ ತೀರ್ಪು ನೀಡಿತ್ತು. ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿರುವ 120B (ಕ್ರಿಮಿನಲ್ ಪಿತೂರಿ) ಪ್ರಕರಣ ಪಿತೂರಿಯ ಭಾಗವಾಗಿದೆ ಎಂದು ಹೈಕೋರ್ಟ್ ಹೇಳಿತ್ತು. ಇದನ್ನು ಪ್ರಶ್ನಸಿ ಡಿಕಡ ಶಿವಕುಮಾರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾ. ಸೂರ್ಯಕಾಂತ್ ಪೀಠ, ಈ ಕೇಸ್ ಕ್ರಿಮಿನಲ್ ಪಿತೂರಿಯ (120B) ಭಾಗವಾಗಿಲ್ಲ. ಹೀಗಾಗಿ ಅಕ್ರಮ ಹಣ ವರ್ಗಾವಣೆ ಕೇಸ್ ಅಡಿಯಲ್ಲಿ ಬರುವುದಿಲ್ಲ. ಹೈಕೋರ್ಟ್ ಆದೇಶವನ್ನು ರದ್ದುಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಪ್ರಕ್ರಿಯೆ ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.
2018 ಆಗಸ್ಟ್ ತಿಂಗಳಲ್ಲಿ ದೆಹಲಿಯಲ್ಲಿ ಇರುವ ಡಿಕೆ ಶಿವಕುಮಾರ್ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ ವೇಳೆ ನಗದು ದೊರೆತಿತ್ತು. ಆಗ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಲಾಗಿತ್ತು. ಇದರ ಅಡಿಯಲ್ಲಿ ಅವರಿಗೆ ಸಂಬಂಧಿಸಿ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಜಾರಿ ನಿರ್ದೇಶನಾಲಯ ನೀಡಿದ ಸಮನ್ಸ್ ಅನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಇದರ ವಿರುದ್ಧ ಡಿಕೆ ಶಿವಕುಮಾರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ: ಅಕ್ರಮ ಆಸ್ತಿಗಳಿಕೆ ಪ್ರಕರಣ: ಡಿಕೆಶಿ ವಿರುದ್ಧ ಎಫ್‌ಐಆರ್, ಲೋಕಾಯುಕ್ತದಿಂದ ಮರು ತನಿಖೆ
ಮತ್ತೊಂದೆಡೆ, ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ರು ವಿರುದ್ಧ ಲೋಕಾಯುಕ್ತ ಇತ್ತೀಚೆಗಷ್ಟೇ ಎಫ್‌ಐಆರ್ ದಾಖಲಿಸಿಕೊಂಡಿತ್ತು. ಸಿಬಿಐ ತನಿಖೆ ಹಿಂಪಡೆಯುವ ಬಗ್ಗೆ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡ ನಂತರ ಪ್ರಕರಣವನ್ನು ಲೋಕಾಯುಕ್ತಕ್ಕೆ ಹಸ್ತಾಂತರಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:03 pm, Tue, 5 March 24