ದಕ್ಷಿಣಕಾಶಿ ಅಂತರಗಂಗೆ ದೇಗುಲದ ಹುಂಡಿ ಹಣ ಕದ್ದ ಚೋರರು
ಕೋಲಾರ: ದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದ ಅಂತರಗಂಗೆಯ ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದ ಹುಂಡಿಯಲ್ಲಿದ್ದ ಹಣ ಕಳ್ಳತನವಾಗಿದೆ. ದೇವಾಲಯದ ಬಾಗಿಲು ಮುರಿದು ಹುಂಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ದೋಚಿದ್ದಾರೆ. ಇತ್ತೀಚೆಗಷ್ಟೇ ಕಾರ್ತಿಕ ಮಾಸ ಜಾತ್ರೆ ಹಾಗೂ ಲಕ್ಷ ದೀಪೋತ್ಸವಕ್ಕೆ ಲಕ್ಷಾಂತರ ಭಕ್ತರು ಬಂದಿದ್ದರು. ಹುಂಡಿಯಲ್ಲಿ ಲಕ್ಷಾಂತರ ರೂಪಾಯಿ ಕಾಣಿಕೆ ಇರುವುದನ್ನು ತಿಳಿದ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಅಲ್ಲದೆ ಹುಂಡಿ ಒಡೆಯಲು ತಂದಿದ್ದ ಹಾರೆಯನ್ನು ದೇವಾಲಯದಲ್ಲೇ ಬಿಟ್ಟು ಹೋಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕೋಲಾರ: ದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದ ಅಂತರಗಂಗೆಯ ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದ ಹುಂಡಿಯಲ್ಲಿದ್ದ ಹಣ ಕಳ್ಳತನವಾಗಿದೆ. ದೇವಾಲಯದ ಬಾಗಿಲು ಮುರಿದು ಹುಂಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ದೋಚಿದ್ದಾರೆ.
ಇತ್ತೀಚೆಗಷ್ಟೇ ಕಾರ್ತಿಕ ಮಾಸ ಜಾತ್ರೆ ಹಾಗೂ ಲಕ್ಷ ದೀಪೋತ್ಸವಕ್ಕೆ ಲಕ್ಷಾಂತರ ಭಕ್ತರು ಬಂದಿದ್ದರು. ಹುಂಡಿಯಲ್ಲಿ ಲಕ್ಷಾಂತರ ರೂಪಾಯಿ ಕಾಣಿಕೆ ಇರುವುದನ್ನು ತಿಳಿದ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಅಲ್ಲದೆ ಹುಂಡಿ ಒಡೆಯಲು ತಂದಿದ್ದ ಹಾರೆಯನ್ನು ದೇವಾಲಯದಲ್ಲೇ ಬಿಟ್ಟು ಹೋಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Published On - 8:29 am, Sat, 14 December 19