ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನ ನಿಗಾ ವಹಿಸಿ: ದಿನೇಶ್ ಗುಂಡೂರಾವ್

ಬೆಂಗಳೂರಿನ ಯಲಹಂಕದದಲ್ಲಿ ಇಂದು (ಜು.26) ಡೆಂಗ್ಯೂ ಹಾಟ್ ಸ್ಪಾಟ್​ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನ ನಿಗಾ ವಹಿಸಿ: ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Follow us
ವಿವೇಕ ಬಿರಾದಾರ
|

Updated on: Jul 26, 2024 | 2:41 PM

ಬೆಂಗಳೂರು, ಜುಲೈ 26: ಡೆಂಗ್ಯೂಗೆ (Dengue) ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಯಲಹಂಕದದಲ್ಲಿ ಇಂದು (ಜು.26) ಡೆಂಗ್ಯೂ ಹಾಟ್ ಸ್ಪಾಟ್​ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ (Bengaluru) ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.

ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ ಎಂದರು.

ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ ಶೇ 50 ರಷ್ಟು ಡೆಂಗ್ಯೂ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಗ್ಯೂ ಹತೋಟಿಗೆ ತರುವಂತೆ ಸೂಚಿಸಿದ್ದೇನೆ ಎಂದರು.

ಇದನ್ನೂ ಓದಿ: Dengue and Chikungunya: ಮಕ್ಕಳಲ್ಲಿ ಡೆಂಗ್ಯೂ, ಚಿಕನ್‌ಗುನ್ಯಾ ತಡೆಗಟ್ಟಲು ಏನು ಮಾಡಬೇಕು?

10 ಜಿಲ್ಲೆಗಳ ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನ ಕಳುಹಿಸಿಕೊಡಲಾಗುತ್ತಿದೆ. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್ ಸ್ಪಾಟ್​ಗಳಿಗೆ ಭೇಟಿ ನೀಡಿ ಡೆಂಗ್ಯೂ ನಿಯಂತ್ರಣ ಕ್ರಮಗಳ ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನ ಹರಿಸಲಿದ್ದಾರೆ. ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಗೋಚರಿಸಿದರೆ ಡೆಂಗ್ಯೂ ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಅಲ್ಲಿ ಫೀವರ್ ಕ್ಲಿನಿಕ್ ಗಳನ್ನ ತೆರೆದು, ಜ್ವರ ಕಾಣಿಸಿಕೊಳ್ಳುವ ಎಲ್ಲರನ್ನ ಡೆಂಗ್ಯೂ ಟೆಸ್ಟಿಂಗ್ ಗೆ ಒಳಪಡಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ

ಕೇರಳದಲ್ಲಿ ನಿಪಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ನಿಪಾ ವೈರಸ್ ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಿಕ್ಕೆ ತೆರಳುವುದು ಬೇಡ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.

ರಾಜ್ಯದಲ್ಲಿ ಇತ್ತಿಚೆಗೆ ಝೀಕಾ ವೈರಸ್ ಪತ್ತೆಯಾಗಿತ್ತು. ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ. ಆದರೆ ನಿಪಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೂಡ ಮುಂಜಾಗೃತೆ ಕ್ರಮಗಳನ್ನ ಅನುಸರಿಸಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!