ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಅಬ್ಬರಿಸತೊಡಗಿದೆ. ಮಲೆನಾಡು, ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತಿದೆ. ಮಳೆ ಹೀಗೆಯೇ ಮುಂದುವರಿದರೆ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಜಲಾಶಯಗಳು ತುಂಬಿತುಳುಕಲಿವೆ. ಸದ್ಯಕ್ಕೆ ಕೃಷಿ ನೀರಾವರಿ ಮತ್ತು ಕುಡಿಯುವ ನೀರಿಗೆ ಯಾವುದೇ ಬಾಧಕವಿಲ್ಲ.
ಜುಲೈ 8ರ ನಂತರ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆಯೇ ಈಗ ಅಲ್ಲಲ್ಲಿ ಮಳೆಯಾಗುತ್ತಿದೆ. ಇನ್ನೇನು ನೈಋತ್ಯ ಮುಂಗಾರು ಚುರುಕು ಪಡೆಯುವ ಸಾಧ್ಯತೆಯಿದೆ.
ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಎಂಬ ವಿವರ ಇಲ್ಲಿ ಲಭ್ಯವಿದೆ.
ಕಾವೇರಿ ಕಣಿವೆ ಭಾಗದ ಜಲಾಶಯಗಳು:
1) ಕೆಆರ್ಎಸ್ ಜಲಾಶಯ | KRS Dam)
ಇಂದಿನ ನೀರಿನ ಮಟ್ಟ: 88.36 ಅಡಿ
ಗರಿಷ್ಠ ಸಾಮರ್ಥ್ಯ: 124.80 ಅಡಿ
2) ಹಾರಂಗಿ ಜಲಾಶಯ | Harangi Dam
ಇಂದಿನ ನೀರಿನ ಮಟ್ಟ: 2844 ಅಡಿ
ಗರಿಷ್ಠ ಸಾಮರ್ಥ್ಯ: 2859 ಅಡಿ
3) ಹೇಮಾವತಿ ಜಲಾಶಯ | Hemavathi Dam
ಇಂದಿನ ನೀರಿನ ಮಟ್ಟ: 2897 ಅಡಿ
ಗರಿಷ್ಠ ಸಾಮರ್ಥ್ಯ: 2922 ಅಡಿ
4) ಕಬಿನಿ ಜಲಾಶಯ | Kabini Dam
ಇಂದಿನ ನೀರಿನ ಮಟ್ಟ: 2276 ಅಡಿ
ಗರಿಷ್ಠ ಸಾಮರ್ಥ್ಯ: 2284 ಅಡಿ
ಜಲ ವಿದ್ಯುತ್ ಅಣೆಕಟ್ಟೆಗಳು:
5) ಲಿಂಗನಮಕ್ಕಿ ಜಲಾಶಯ | Linganamakki Dam
ಇಂದಿನ ನೀರಿನ ಮಟ್ಟ: 1785 ಅಡಿ
ಗರಿಷ್ಠ ಸಾಮರ್ಥ್ಯ: 1819 ಅಡಿ
6) ಸೂಪಾ ಜಲಾಶಯ | Supa Dam
ಇಂದಿನ ನೀರಿನ ಮಟ್ಟ: 538 ಅಡಿ
ಗರಿಷ್ಠ ಸಾಮರ್ಥ್ಯ: 564 ಅಡಿ
ಕೃಷ್ಣಾ ನದಿ ಭಾಗದ ಜಲಾಶಯಗಳು:
7) ತುಂಗಾಭದ್ರಾ ಜಲಾಶಯ | Tungabhadra Dam
ಇಂದಿನ ನೀರಿನ ಮಟ್ಟ: 1611 ಅಡಿ
ಗರಿಷ್ಠ ಸಾಮರ್ಥ್ಯ: 1609 ಅಡಿ
8) ಭದ್ರಾ ಜಲಾಶಯ | Bhadra Dam
ಇಂದಿನ ನೀರಿನ ಮಟ್ಟ: 156 ಅಡಿ
ಗರಿಷ್ಠ ಸಾಮರ್ಥ್ಯ: 186 ಅಡಿ
9) ಮಲಪ್ರಭಾ ಜಲಾಶಯ | Malaprabha Dam
ಇಂದಿನ ನೀರಿನ ಮಟ್ಟ: 2063 ಅಡಿ
ಗರಿಷ್ಠ ಸಾಮರ್ಥ್ಯ: 2063 ಅಡಿ
10) ಘಟಪ್ರಭಾ ಜಲಾಶಯ | Ghataprabha Dam
ಇಂದಿನ ನೀರಿನ ಮಟ್ಟ: 2136 ಅಡಿ
ಗರಿಷ್ಠ ಸಾಮರ್ಥ್ಯ: 2175 ಅಡಿ
11) ನಾರಾಯಣಪುರ ಜಲಾಶಯ | Narayanpur Dam
ಇಂದಿನ ನೀರಿನ ಮಟ್ಟ: 491 ಮೀಟರ್
ಗರಿಷ್ಠ ಸಾಮರ್ಥ್ಯ: 492.25 ಮೀಟರ್
12) ಆಲಮಟ್ಟಿ ಜಲಾಶಯ | Almatti Dam
ಇಂದಿನ ನೀರಿನ ಮಟ್ಟ: 518 ಮೀಟರ್
ಗರಿಷ್ಠ ಸಾಮರ್ಥ್ಯ: 519.69 ಮೀಟರ್
Rainfall Forecast: (1/2) Widespread moderate to heavy rains and at isolated places very heavy rains likely over Coastal, widespread light to moderate rains with isolated heavy rains likely over Malnad districts pic.twitter.com/CQj5DQzP8o
— KSNDMC (@KarnatakaSNDMC) July 11, 2021
Published On - 8:44 am, Mon, 12 July 21