Karnataka Dams: ರಾಜ್ಯದಲ್ಲಿ ಮಳೆ ಜೋರು; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
Karnataka Reservoirs water level: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದಲೆ ಮಳೆ ಸುರಿಯತೊಡಗಿದ್ದು, ಇನ್ನೂ ಮೂರು ದಿನ ನಿರಂತರವಾಗಿ ಮಳೆಯಾಗಲಿದೆ. ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದಲೆ ಮಳೆ ಸುರಿಯತೊಡಗಿದ್ದು, ಇನ್ನೂ ಮೂರು ದಿನ ನಿರಂತರವಾಗಿ ಮಳೆಯಾಗಲಿದೆ. ಇನ್ನು ಕರ್ನಾಟಕದ ಮಲೆನಾಡು, ಕರಾವಳಿ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಕಳೆದೊಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಜೂನ್ ತಿಂಗಳ ಆರಂಭದಲ್ಲಿ ಯಥೇಚ್ಚವಾಗಿ ಸುರಿದು ನಂತರ ಸಣ್ಣ ವಿರಾಮವನ್ನು ಪಡೆದಿದ್ದ ನೈಋತ್ಯ ಮಾರುತಗಳು (Monsoon 2021) ಈಗ ಮತ್ತೆ ಮಳೆಯನ್ನು ಹೊತ್ತು ತಂದಿವೆ. ದಕ್ಷಿಣ ಭಾರತದ ಚಿರಾಪುಂಜಿ ಎಂದೇ ಹೆಸರಾದ ಆಗುಂಬೆ, ಹುಲಿಕಲ್ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಹಲವು ಭಾಗಗಳಲ್ಲಿ ಗಾಳಿ, ಮಳೆಯ ಅಬ್ಬರ ಜೋರಾಗಿಯೇ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗದಲ್ಲೂ ಧಾರಾಕಾರ ಮಳೆ (Heavy Rain) ಸುರಿಯುತ್ತಿದ್ದು, ಮುಂದಿನ ಎರಡು ಮೂರು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಅಧಿಕವಾಗಿದೆ ಎಂದು ಹವಾಮಾನ ವರದಿಗಳು (Weather Report) ಮುನ್ಸೂಚನೆ ನೀಡಿವೆ.
ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಎಂಬ ವಿವರ ಇಲ್ಲಿ ಲಭ್ಯವಿದೆ.
ಕಾವೇರಿ ಕಣಿವೆ ಭಾಗದ ಜಲಾಶಯಗಳು:
1) ಕೆಆರ್ಎಸ್ ಜಲಾಶಯ | KRS Dam) ಇಂದಿನ ನೀರಿನ ಮಟ್ಟ: 89 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ
2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2849 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ
3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2898 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ
4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2277 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ
ಜಲ ವಿದ್ಯುತ್ ಅಣೆಕಟ್ಟೆಗಳು:
5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1785 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ
6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 539 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ
ಕೃಷ್ಣಾ ನದಿ ಭಾಗದ ಜಲಾಶಯಗಳು:
7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1611 ಅಡಿ ಗರಿಷ್ಠ ಸಾಮರ್ಥ್ಯ: 1609 ಅಡಿ
8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 157 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ
9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2063 ಅಡಿ ಗರಿಷ್ಠ ಸಾಮರ್ಥ್ಯ: 2063 ಅಡಿ
10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2138 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ
11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 492 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್
12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 518 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್
(2/2)-Yellow alert: Bagalkote Bidar Gadag Koppala Raichur & Yadgir dists have given Yellow alert by IMD as of 13.07.21 @ 1300hrs to 8:30 AM of 14.07.21.Orange alert defines as isolated very heavy rains (>115.6mm) likely. Yellow alert as, isolated heavy rains (>64.5mm) likely.
— KSNDMC (@KarnatakaSNDMC) July 13, 2021
(Monsoon 2021 Karnataka 12 reservoirs and dams water level as on 14th July 2021)