ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಹವಾಮಾನ ಇಲಾಖೆ ಹೇಳಿರು ಪ್ರಕಾರ, ಇನ್ನೂ ನಾಲ್ಕು ದಿನಗಳ ಕಾಲ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜುಲೈ 18ರವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಕರ್ನಾಟಕ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಏಳುವ ಗಾಳಿ ಯಿಂದ ಅಲೆಗಳ ಹೊಡೆತ ಇನ್ನಷ್ಟು ಹೆಚ್ಚಲಿದ್ದು, ಕಡಲ ಕೊರೆತ ಉಂಟಾಗುವ ಸಾಧ್ಯತೆ ಇದೆ (Weather Report). ಈ ಹಿನ್ನೆಲೆ ಈಗಾಗಲೇ ಈ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. (Monsoon 2021)
ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ಕಾವೇರಿ ಕಣಿವೆ ಭಾಗದ ಜಲಾಶಯಗಳು:
1) ಕೆಆರ್ಎಸ್ ಜಲಾಶಯ | KRS Dam
ಇಂದಿನ ನೀರಿನ ಮಟ್ಟ: 89.20 ಅಡಿ
ಗರಿಷ್ಠ ಸಾಮರ್ಥ್ಯ: 124.80 ಅಡಿ
2) ಹಾರಂಗಿ ಜಲಾಶಯ | Harangi Dam
ಇಂದಿನ ನೀರಿನ ಮಟ್ಟ: 2850 ಅಡಿ
ಗರಿಷ್ಠ ಸಾಮರ್ಥ್ಯ: 2859 ಅಡಿ
3) ಹೇಮಾವತಿ ಜಲಾಶಯ | Hemavathi Dam
ಇಂದಿನ ನೀರಿನ ಮಟ್ಟ: 2898 ಅಡಿ
ಗರಿಷ್ಠ ಸಾಮರ್ಥ್ಯ: 2922 ಅಡಿ
4) ಕಬಿನಿ ಜಲಾಶಯ | Kabini Dam
ಇಂದಿನ ನೀರಿನ ಮಟ್ಟ: 2278 ಅಡಿ
ಗರಿಷ್ಠ ಸಾಮರ್ಥ್ಯ: 2284 ಅಡಿ
ಜಲ ವಿದ್ಯುತ್ ಅಣೆಕಟ್ಟೆಗಳು:
5) ಲಿಂಗನಮಕ್ಕಿ ಜಲಾಶಯ | Linganamakki Dam
ಇಂದಿನ ನೀರಿನ ಮಟ್ಟ: 1786 ಅಡಿ
ಗರಿಷ್ಠ ಸಾಮರ್ಥ್ಯ: 1819 ಅಡಿ
6) ಸೂಪಾ ಜಲಾಶಯ | Supa Dam
ಇಂದಿನ ನೀರಿನ ಮಟ್ಟ: 539 ಅಡಿ
ಗರಿಷ್ಠ ಸಾಮರ್ಥ್ಯ: 564 ಅಡಿ
ಕೃಷ್ಣಾ ನದಿ ಭಾಗದ ಜಲಾಶಯಗಳು:
7) ತುಂಗಾಭದ್ರಾ ಜಲಾಶಯ | Tungabhadra Dam
ಇಂದಿನ ನೀರಿನ ಮಟ್ಟ: 1611 ಅಡಿ
ಗರಿಷ್ಠ ಸಾಮರ್ಥ್ಯ: 1609 ಅಡಿ
8) ಭದ್ರಾ ಜಲಾಶಯ | Bhadra Dam
ಇಂದಿನ ನೀರಿನ ಮಟ್ಟ: 158 ಅಡಿ
ಗರಿಷ್ಠ ಸಾಮರ್ಥ್ಯ: 186 ಅಡಿ
9) ಮಲಪ್ರಭಾ ಜಲಾಶಯ | Malaprabha Dam
ಇಂದಿನ ನೀರಿನ ಮಟ್ಟ: 2064 ಅಡಿ
ಗರಿಷ್ಠ ಸಾಮರ್ಥ್ಯ: 2063 ಅಡಿ
10) ಘಟಪ್ರಭಾ ಜಲಾಶಯ | Ghataprabha Dam
ಇಂದಿನ ನೀರಿನ ಮಟ್ಟ: 2139 ಅಡಿ
ಗರಿಷ್ಠ ಸಾಮರ್ಥ್ಯ: 2175 ಅಡಿ
11) ನಾರಾಯಣಪುರ ಜಲಾಶಯ | Narayanpur Dam
ಇಂದಿನ ನೀರಿನ ಮಟ್ಟ: 492 ಮೀಟರ್
ಗರಿಷ್ಠ ಸಾಮರ್ಥ್ಯ: 492.25 ಮೀಟರ್
12) ಆಲಮಟ್ಟಿ ಜಲಾಶಯ | Almatti Dam
ಇಂದಿನ ನೀರಿನ ಮಟ್ಟ: 518 ಮೀಟರ್
ಗರಿಷ್ಠ ಸಾಮರ್ಥ್ಯ: 519.69 ಮೀಟರ್
(Monsoon 2021 Karnataka 12 reservoirs and dams water level as on 15th July 2021)
ಮಳೆ ಮುನ್ಸೂಚನೆ:ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ pic.twitter.com/WD0FrEuJrV
— KSNDMC (@KarnatakaSNDMC) July 14, 2021
Published On - 8:57 am, Thu, 15 July 21