Karnataka Dams Water Level: ವ್ಯಾಪಕ ಮಳೆ, ಕೆಆರ್​ಎಸ್​ ತುಂಬುತ್ತಿದೆ; ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

Karnataka Reservoirs: ಕರ್ನಾಟಕದಲ್ಲಿ ಇನ್ನೂ ಎರಡು ಮೂರು ದಿನ ಉತ್ತಮ ಮಳೆಯಾಗಲಿದೆ. ಹೀಗಾಗಿ ಇನ್ನೂ ಮಳೆಯ ವಾತಾವರಣ (Monsoon 2021) ಮುಂದುವರೆಯಲಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ಇದೆ.

Karnataka Dams Water Level: ವ್ಯಾಪಕ ಮಳೆ, ಕೆಆರ್​ಎಸ್​ ತುಂಬುತ್ತಿದೆ; ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
ಮುಂಗಾರು ಮಳೆ ಉತ್ತಮ; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 23, 2021 | 9:01 AM

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಎರಡು ಮೂರು ದಿನ ಉತ್ತಮ ಮಳೆಯಾಗಲಿದೆ. ಹೀಗಾಗಿ ಇನ್ನೂ ಮಳೆಯ ವಾತಾವರಣ (Monsoon 2021) ಮುಂದುವರೆಯಲಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ಇದೆ. ಕೆಆರ್​ಎಸ್​ ಜಲಾಶಯದಲ್ಲಿ (KRS Dam) ನೀರಿನ ಮಟ್ಟ ಶತಕ ಬಾರಿಸಿದೆ. ಅಲ್ಲೀಗ 101 ಅಡಿ ನೀರು ಸಂಗ್ರಹವಾಗಿದೆ.

ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರದೇಶಗಳಲ್ಲಿ ಕಡಿಮೆ ಒತ್ತಡವಿರುವ ಪ್ರದೇಶ ವಿಸ್ತರಿಸಿರುವುದರಿಂದಾಗಿ ಜುಲೈ 23ರ ವೇಳೆಗೆ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಜುಲೈ 24ರವರಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಂದರೆ ಜುಲೈ 21, 22 ಮತ್ತು 23ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸದರಿ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​​ ಘೋಷಣೆ ಮಾಡಲಾಗಿದೆ. ಇತ್ತ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಅಧಿಕ ಪ್ರಮಾಣದ ಮಳೆಯಾಗಲಿದೆ.

ಇಂದು ಮತ್ತು ನಾಳೆ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಜುಲೈ 23ರಂದು ಮಳೆ ಹೆಚ್ಚಾಗುವ ಸಂಭವ ಇರುವುದರಿಂದ ಆರೆಂಜ್​ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರ್ಗಿ, ಗದಗ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದ್ದು, ಜುಲೈ 22 ಮತ್ತು 23ರಂದು ಯೆಲ್ಲೋ ಅಲರ್ಟ್​ ನೀಡಲಾಗಿದೆ. (Weather Report).

ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 101.00 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2856 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2907 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2280 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1794 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 542 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1619 ಅಡಿ ಗರಿಷ್ಠ ಸಾಮರ್ಥ್ಯ: 1633 ಅಡಿ

8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 166 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2070.00 ಅಡಿ ಗರಿಷ್ಠ ಸಾಮರ್ಥ್ಯ: 2079.05 ಅಡಿ

10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2148 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 492 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 518 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

(Monsoon 2021 Karnataka 12 reservoirs and dams water level as on 21th July 2021)

Published On - 8:22 am, Wed, 21 July 21