Karnataka Dams Water Level: ಮುಂದುವರಿದ ಮುಂಗಾರು ಮಳೆ, ಕರ್ನಾಟಕದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
Karnataka Reservoirs: ಕರ್ನಾಟಕದಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ಇದೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯ ಆರ್ಭಟ ಇದೆ (Monsoon 2021). ಇನ್ನು ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಕಾವೇರಿ ನದಿಯಲ್ಲಿ ಒಂದೇ ದಿನ 3 ಅಡಿ ನೀರು ಹೆಚ್ಚಳಗೊಂಡಿದೆ. ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಏರುತ್ತಿದೆ. ಅಲ್ಲೀಗ 102 ಅಡಿ ನೀರು ಸಂಗ್ರಹವಾಗಿದೆ.
ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ಕಾವೇರಿ ಕಣಿವೆ ಭಾಗದ ಜಲಾಶಯಗಳು:
1) ಕೆಆರ್ಎಸ್ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 102.00 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ
2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2856 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ
3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2908 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ
4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2280 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ
ಜಲ ವಿದ್ಯುತ್ ಅಣೆಕಟ್ಟೆಗಳು:
5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1795 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ
6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 543 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ
ಕೃಷ್ಣಾ ನದಿ ಭಾಗದ ಜಲಾಶಯಗಳು:
7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1621 ಅಡಿ ಗರಿಷ್ಠ ಸಾಮರ್ಥ್ಯ: 1633 ಅಡಿ
8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 167 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ
9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2066.00 ಅಡಿ ಗರಿಷ್ಠ ಸಾಮರ್ಥ್ಯ: 2079.05 ಅಡಿ
10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2150 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ
11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 492 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್
12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 518 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್
(Monsoon 2021 Karnataka 12 reservoirs and dams water level as on 22nd July 2021)
Rainfall Forecast: widespread moderate rains with isolated heavy-very heavy rains likely over coastal & Malnad districts, scattered-widespread light-moderate rains with isolated heavy rains over NIK dists & isolated-scattered with light-moderate rains likely over SIK dists pic.twitter.com/bbMjCadkAg
— KSNDMC (@KarnatakaSNDMC) July 21, 2021
Published On - 8:15 am, Thu, 22 July 21