Karnataka Dams Water Level: ಕೊಡಗಿನಲ್ಲಿ 4 ದಿನ ಭಾರಿ ಮಳೆ, ಕರ್ನಾಟಕದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

Karnataka Reservoirs: ಕರ್ನಾಟಕದಲ್ಲಿ ಇನ್ನೂ ಎರಡು ಮೂರು ದಿನ ಉತ್ತಮ ಮಳೆಯಾಗಲಿದೆ. ಹೀಗಾಗಿ ಇನ್ನೂ ಮಳೆಯ ವಾತಾವರಣ (Monsoon 2021) ಮುಂದುವರೆಯಲಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ಇದೆ.  

Karnataka Dams Water Level: ಕೊಡಗಿನಲ್ಲಿ 4 ದಿನ ಭಾರಿ ಮಳೆ, ಕರ್ನಾಟಕದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
ಕೊಡಗಿನಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ, ಕರ್ನಾಟಕದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 23, 2021 | 8:58 AM

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಎರಡು ಮೂರು ದಿನ ಉತ್ತಮ ಮಳೆಯಾಗಲಿದ್ದು, ಉತ್ತರ ಕನ್ನಡ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡಾ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಅಂತೆಯೇ, ಬೀದರ್, ಗದಗ, ಹಾವೇರಿ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್​ ನೀಡಲಾಗಿದೆ. (Monsoon 2021)

ಕೊಡಗಿನಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ ವರುಣನ ಪ್ರತಾಕ್ಕೆ ಕೊಡಗು ನಡುಗಿ ಹೋಗಿದೆ. ಪ್ರತಿದಿನವೂ ಮಳೆಯಿಂದ ಅವಾಂತರ ಸಂಭವಿಸ್ತಿದೆ. ಇನ್ನೂ ನಾಲ್ಕು ದಿನ ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು, ಶನಿವಾರ ಮತ್ತು ಭಾನುವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಹಾರಾಷ್ಟ್ರ, ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ದೂದಗಂಗಾ, ವೇದಗಂಗಾ, ಹಿರಣ್ಯಕೇಶಿ ನದಿ ಹರಿವು ಹೆಚ್ಚಳವಾಗಿದೆ. ಭಾರಿ ಮಳೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ನೆರೆ ಭೀತಿ ಶುರುವಾಗಿದೆ. ನದಿ ಪಾತ್ರದ ಗ್ರಾಮಗಳಿಗೆ ನೀರು ನುಗ್ಗುವ ಆತಂಕ ಹೆಚ್ಚಾಗಿದೆ. ಜನರು ನದಿ ತೀರದತ್ತ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. (Karnataka Dams Water Level)

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಂದರೆ ಜುಲೈ 21, 22 ಮತ್ತು 23ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸದರಿ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​​ ಘೋಷಣೆ ಮಾಡಲಾಗಿದೆ. ಇತ್ತ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಅಧಿಕ ಪ್ರಮಾಣದ ಮಳೆಯಾಗಲಿದೆ. ಇಂದು ಮತ್ತು ನಾಳೆ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರ್ಗಿ, ಗದಗ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದ್ದು, ಜುಲೈ 22 ಮತ್ತು 23ರಂದು ಯೆಲ್ಲೋ ಅಲರ್ಟ್​ ನೀಡಲಾಗಿದೆ. (Weather Report).

ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 103.00 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2856 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2909 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2281 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1797 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 544 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1622 ಅಡಿ ಗರಿಷ್ಠ ಸಾಮರ್ಥ್ಯ: 1633 ಅಡಿ

8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 167 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2066.00 ಅಡಿ ಗರಿಷ್ಠ ಸಾಮರ್ಥ್ಯ: 2079.05 ಅಡಿ

10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2152 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 492 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 518 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

(Monsoon 2021 Karnataka 12 reservoirs and dams water level as on 23rd July 2021)

Published On - 8:13 am, Fri, 23 July 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್