ಬೆಂಗಳೂರು: ಕಳೆದ 10 ದಿನಗಳಲ್ಲಿ ಕರ್ನಾಟಕದಲ್ಲಿ ಮುಂಗಾರು ಮಳೆ ವಿಪರೀತ ಅನಿಸುವಷ್ಟು ಎಡೆಬಿಡದೆ ಸುರಿಯುತ್ತಿದೆ. ರಾಜ್ಯದಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಶೇ. 20ರಷ್ಟು ಅಧಿಕ ಮಳೆಯಾಗಿದ್ದು, ಕರ್ನಾಟಕ ಮಳೆನಾಡು ಆಗಿ ಮಾರ್ಪಟ್ಟಿದೆ. ಇನ್ನೂ 2 ದಿನ ಮಳೆಯಾಗಲಿದ್ದು, 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. (Monsoon 2021)
ಮುಂಗಾರಿನ ಅವಧಿಯಲ್ಲಿ ಅಂದರೆ ಜೂನ್ 1 ರಿಂದ ಜುಲೈ 19ರ ನಡುವಣ ಅವಧಿಯಲ್ಲಿ ಕರ್ನಾಟಕದಲ್ಲಿ ವಾಡಿಕೆಯಂತೆ 484 ಮಿ.ಮೀ. ಮಳೆಯಾಗಬೇಕು. ಇದೀಗ ಆ ವಾಡಿಕೆ ಪ್ರಮಾಣಕ್ಕಿಂತ ಹೆಚ್ಚು ಅಂದರೆ 578 ಮಿ.ಮೀ. ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್ಎನ್ಡಿಎಂಸಿ Karnataka State Natural Disaster Management Centre -Karnataka SNDMC) ಮೂಲಗಳು ತಿಳಿಸಿವೆ.
ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ (ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ) ಜಲಾಶಯಗಳ ನೀರಿನ ಮಟ್ಟ (Karnataka Dams Water Level) ಎಷ್ಟಿದೆ?
ಕಾವೇರಿ ಕಣಿವೆ ಭಾಗದ ಜಲಾಶಯಗಳು:
1) ಕೆಆರ್ಎಸ್ ಜಲಾಶಯ | KRS Dam
ಇಂದಿನ ನೀರಿನ ಮಟ್ಟ: 111.00 ಅಡಿ
ಗರಿಷ್ಠ ಸಾಮರ್ಥ್ಯ: 124.80 ಅಡಿ
2) ಹಾರಂಗಿ ಜಲಾಶಯ | Harangi Dam
ಇಂದಿನ ನೀರಿನ ಮಟ್ಟ: 2855 ಅಡಿ
ಗರಿಷ್ಠ ಸಾಮರ್ಥ್ಯ: 2859 ಅಡಿ
3) ಹೇಮಾವತಿ ಜಲಾಶಯ | Hemavathi Dam
ಇಂದಿನ ನೀರಿನ ಮಟ್ಟ: 2917 ಅಡಿ
ಗರಿಷ್ಠ ಸಾಮರ್ಥ್ಯ: 2922 ಅಡಿ
4) ಕಬಿನಿ ಜಲಾಶಯ | Kabini Dam
ಇಂದಿನ ನೀರಿನ ಮಟ್ಟ: 2280 ಅಡಿ
ಗರಿಷ್ಠ ಸಾಮರ್ಥ್ಯ: 2284 ಅಡಿ
ಜಲ ವಿದ್ಯುತ್ ಅಣೆಕಟ್ಟೆಗಳು:
5) ಲಿಂಗನಮಕ್ಕಿ ಜಲಾಶಯ | Linganamakki Dam
ಇಂದಿನ ನೀರಿನ ಮಟ್ಟ: 1804 ಅಡಿ
ಗರಿಷ್ಠ ಸಾಮರ್ಥ್ಯ: 1819 ಅಡಿ
6) ಸೂಪಾ ಜಲಾಶಯ | Supa Dam
ಇಂದಿನ ನೀರಿನ ಮಟ್ಟ: 550 ಅಡಿ
ಗರಿಷ್ಠ ಸಾಮರ್ಥ್ಯ: 564 ಅಡಿ
ಕೃಷ್ಣಾ ನದಿ ಭಾಗದ ಜಲಾಶಯಗಳು:
7) ತುಂಗಾಭದ್ರಾ ಜಲಾಶಯ | Tungabhadra Dam
ಇಂದಿನ ನೀರಿನ ಮಟ್ಟ: 1630 ಅಡಿ
ಗರಿಷ್ಠ ಸಾಮರ್ಥ್ಯ: 1633 ಅಡಿ
8) ಭದ್ರಾ ಜಲಾಶಯ | Bhadra Dam
ಇಂದಿನ ನೀರಿನ ಮಟ್ಟ: 178 ಅಡಿ
ಗರಿಷ್ಠ ಸಾಮರ್ಥ್ಯ: 186 ಅಡಿ
9) ಮಲಪ್ರಭಾ ಜಲಾಶಯ | Malaprabha Dam
ಇಂದಿನ ನೀರಿನ ಮಟ್ಟ: 2077 ಅಡಿ
ಗರಿಷ್ಠ ಸಾಮರ್ಥ್ಯ: 2079.05 ಅಡಿ
10) ಘಟಪ್ರಭಾ ಜಲಾಶಯ | Ghataprabha Dam
ಇಂದಿನ ನೀರಿನ ಮಟ್ಟ: 2170 ಅಡಿ
ಗರಿಷ್ಠ ಸಾಮರ್ಥ್ಯ: 2175 ಅಡಿ
11) ನಾರಾಯಣಪುರ ಜಲಾಶಯ | Narayanpur Dam
ಇಂದಿನ ನೀರಿನ ಮಟ್ಟ: 490 ಮೀಟರ್
ಗರಿಷ್ಠ ಸಾಮರ್ಥ್ಯ: 492.25 ಮೀಟರ್
12) ಆಲಮಟ್ಟಿ ಜಲಾಶಯ | Almatti Dam
ಇಂದಿನ ನೀರಿನ ಮಟ್ಟ: 516 ಮೀಟರ್
ಗರಿಷ್ಠ ಸಾಮರ್ಥ್ಯ: 519.69 ಮೀಟರ್
24hrs☔️ Map of #Karnataka from 8.30 am on 24th July 2021 to 8.30 am on 25th July 2021, highest 106.5mm ☔️
@Chikkamagalur_Melina Huluvartthi. pic.twitter.com/DT5VWZbO3Z— KSNDMC (@KarnatakaSNDMC) July 25, 2021
(Monsoon 2021 Karnataka 12 reservoirs and dams water level as on 26th July 2021 )
Published On - 8:16 am, Mon, 26 July 21