Karnataka Dams: ರಾಜ್ಯದಲ್ಲಿ ಮುಂಗಾರು ಚುರುಕು; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
Karnataka Reservoirs water level: ರಾಜ್ಯದಲ್ಲಿ ಕೊಂಚ ಕ್ಷೀಣಿಸಿದ್ದ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದೆ. ವರುಣ ಪುನಾರಾಗಮನ ಮಾಡುವಂತೆ ತೋರುತ್ತಿದ್ದು, ಮಲೆನಾಡು, ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಹಾಗಾಗಿ ಈ ಬಾರಿ ಮಳೆ ಚೆನ್ನಾಗಿ ಆದರೆ, ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಜಲಾಶಯಗಳು ತುಂಬಿತುಳುಕಲಿವೆ. ಆದರೆ ಸದ್ಯಕ್ಕೆ ಕೃಷಿ ನೀರಾವರಿ ಮತ್ತು ಕುಡಿಯುವ ನೀರಿಗೆ ಯಾವುದೇ ಬಾಧಕವಿಲ್ಲ.
ಬೆಂಗಳೂರು: ಈ ಬಾರಿ ಮೇ ತಿಂಗಳ ಆರಂಭದಿಂದಲೇ ಆಗಾಗ ಮಳೆ ಸುರಿಯುತ್ತಿದ್ದರೂ ಮುಂಗಾರು ಪ್ರವೇಶದ ನಂತರ ಮೊದಲ ಒಂದೆರೆಡು ವಾರಗಳನ್ನು ಹೊರತುಪಡಿಸಿದರೆ ಎಲ್ಲೆಡೆ ಮಳೆ ಕ್ಷೀಣವಾಗಿತ್ತು. ಆದರೆ, ಇದೀಗ ವರುಣ ಪುನಾರಾಗಮನ ಮಾಡುವಂತೆ ತೋರುತ್ತಿದ್ದು, ಮಲೆನಾಡು, ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಹಾಗಾಗಿ ಈ ಬಾರಿ ಮಳೆ ಚೆನ್ನಾಗಿ ಆದರೆ, ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಜಲಾಶಯಗಳು ತುಂಬಿತುಳುಕಲಿವೆ. ಆದರೆ ಸದ್ಯಕ್ಕೆ ಕೃಷಿ ನೀರಾವರಿ ಮತ್ತು ಕುಡಿಯುವ ನೀರಿಗೆ ಯಾವುದೇ ಬಾಧಕವಿಲ್ಲ.
ಮುಂಗಾರಿನ ಬಗ್ಗೆ ಈ ಹಿಂದೆ ಮಾಹಿತಿ ನೀಡಿದ್ದ ಹವಾಮಾನ ಇಲಾಖೆ ಜುಲೈ ಮೊದಲ ವಾರದ ಅಂತ್ಯದ ತನಕ ಮುಂಗಾರಿಗೆ ಪೂರಕ ವಾತಾವರಣ ಇಲ್ಲ. ಆದರೆ, ಎರಡನೇ ವಾರದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಜುಲೈ 8ರ ನಂತರ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಮುನ್ಸೂಚನೆ ನೀಡಿತ್ತು. ಅದರಂತೆಯೇ ಈಗ ಮಳೆ ಆರಂಭವಾಗಿದೆ ಎನ್ನುವುದು ಗಮನಾರ್ಹ. ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ಹೇಳುವಂತೆ, ಜುಲೈ ಎರಡನೇ ವಾರದಲ್ಲಿ ಅಂದರೆ ಪ್ರಸ್ತುತ ಹಂತದಲ್ಲಿ ನೈರುತ್ಯ ಮುಂಗಾರು ಚುರುಕು ಪಡೆಯುವ ಸಾಧ್ಯತೆಯಿದೆ.
ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಎಂಬ ವಿವರ ಇಲ್ಲಿ ಲಭ್ಯವಿದೆ.
ಕಾವೇರಿ ಕಣಿವೆ ಭಾಗದ ಜಲಾಶಯಗಳು:
1) ಕೆಆರ್ಎಸ್ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 89.18 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ
2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2843 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ
3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2896 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ
4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2276 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ
ಜಲ ವಿದ್ಯುತ್ ಅಣೆಕಟ್ಟೆಗಳು:
5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1784 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ
6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 538 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ
ಕೃಷ್ಣಾ ನದಿ ಭಾಗದ ಜಲಾಶಯಗಳು:
7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1610 ಅಡಿ ಗರಿಷ್ಠ ಸಾಮರ್ಥ್ಯ: 1609 ಅಡಿ
8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 156 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ
9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2063 ಅಡಿ ಗರಿಷ್ಠ ಸಾಮರ್ಥ್ಯ: 2063 ಅಡಿ
10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2137 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ
11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 490.03 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್
12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 518 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್
(Monsoon 2021 karnataka 12 reservoirs and dams water level as on 9th july 2021)
Published On - 8:35 am, Fri, 9 July 21