Karnataka Dams Water Level: ಆಗಸ್ಟ್ನಲ್ಲಿ ಉತ್ತಮ ಮಳೆ; ತುಂಬಿ ತುಳುಕಲಿದೆ ಕೆಆರ್ಎಸ್, ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ
ಅಲ್ಲಲ್ಲಿ ಮಳೆಯಾಗುತ್ತಿದ್ದು ರಾಜ್ಯದಲ್ಲಿನ ಬಹುತೇಕ ಜಲಾಶಯಗಳು ತುಂಬತೊಡಗಿವೆ. ಕಾವೇರಿ ಕಣಿವೆ ಭಾಗದ ಕೆಆರ್ಎಸ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಇನ್ನು 8 ಅಡಿ ನೀರು ಬರಬೇಕಿದೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಆಗಸ್ಟ್ ತಿಂಗಳಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸುವ ಸಾಧ್ಯತೆಯಿದೆ.
ಬೆಂಗಳೂರು: ಅಲ್ಲಲ್ಲಿ ಮಳೆಯಾಗುತ್ತಿದ್ದು ರಾಜ್ಯದಲ್ಲಿನ ಬಹುತೇಕ ಜಲಾಶಯಗಳು ತುಂಬತೊಡಗಿವೆ. ಇದೇ ಆಗಸ್ಟ್ ತಿಂಗಳಲ್ಲಿ ಮಳೆ ಉತ್ತವಾಗಲಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್ಎನ್ಡಿಎಂಸಿ Karnataka State Natural Disaster Management Centre -Karnataka SNDMC) ಮೂಲಗಳ ಪ್ರಕಾರ ಈ ತಿಂಗಳಲ್ಲಿ ಮತ್ತೆ ಭರ್ಜರಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ (Monsoon 2021). ಕಾವೇರಿ ಕಣಿವೆ ಭಾಗದ ಕೆಆರ್ಎಸ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಇನ್ನು 8 ಅಡಿ ನೀರು ಬರಬೇಕಿದೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಆಗಸ್ಟ್ ತಿಂಗಳಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸುವ ಸಾಧ್ಯತೆಯಿದೆ.
ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ (Karnataka Dams Water Level) ಎಷ್ಟಿದೆ?
ಕಾವೇರಿ ಕಣಿವೆ ಭಾಗದ ಜಲಾಶಯಗಳು:
1) ಕೆಆರ್ಎಸ್ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 116.00 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ
2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2856 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ
3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2920 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ
4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2280 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ
ಜಲ ವಿದ್ಯುತ್ ಅಣೆಕಟ್ಟೆಗಳು:
5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1808 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ
6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 553 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ
ಕೃಷ್ಣಾ ನದಿ ಭಾಗದ ಜಲಾಶಯಗಳು:
7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1632.07 ಅಡಿ ಗರಿಷ್ಠ ಸಾಮರ್ಥ್ಯ: 1633 ಅಡಿ
8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 183 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ
9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2076 ಅಡಿ ಗರಿಷ್ಠ ಸಾಮರ್ಥ್ಯ: 2079.05 ಅಡಿ
10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2173 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ
11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 491 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್
12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 518 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್
24hrs☔️Map of #Karnataka from 8.30 am on 31st July 2021 to 8.30 am on 1st August 2021, highest 68mm ☔️@Uttara Kannada_Siddapur_Korlakai (Adukatta). pic.twitter.com/i1Dy7VnxPH
— KSNDMC (@KarnatakaSNDMC) August 1, 2021
(Monsoon 2021 Karnataka 12 reservoirs and dams water level as on Aug 3 2021)
Published On - 8:32 am, Tue, 3 August 21