Karnataka Monsoon: ಕರಾವಳಿ ಮತ್ತು ರಾಜ್ಯದ ಉತ್ತರ ಭಾಗದಲ್ಲಿ ಜೂನ್ 11ರವರೆಗೆ ಮಳೆ ಆರ್ಭಟ ಜೋರು

Monsoon 2021: ಜೂನ್ 3ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿದ್ದು, ಕರ್ನಾಟಕಕ್ಕೆ ಜೂನ್ 5ಕ್ಕೆ ಪ್ರವೇಶವಾಗಿದೆ. ಅದರ ಪರಿಣಾಮವಾಗಿ ಮಲೆನಾಡು, ಕರ್ನಾಟಕದ ಕರಾವಳಿ ತೀರದಲ್ಲೂ ವ್ಯಾಪಕ ಮಳೆಯಾಗುತ್ತಿದೆ. ಆದರೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆ ಸಾಧಾರಣವಾಗಿದೆ.

Karnataka Monsoon: ಕರಾವಳಿ ಮತ್ತು ರಾಜ್ಯದ ಉತ್ತರ ಭಾಗದಲ್ಲಿ ಜೂನ್ 11ರವರೆಗೆ ಮಳೆ ಆರ್ಭಟ ಜೋರು
ಸಾಂಕೇತಿಕ ಚಿತ್ರ
Follow us
TV9 Web
| Updated By: Digi Tech Desk

Updated on:Jun 08, 2021 | 11:05 AM

ಮಂಗಳೂರು: ರಾಜ್ಯದಲ್ಲಿ ಈ ಸಾಲಿನ ಮುಂಗಾರು ಮಳೆ ಇದುವರೆಗೂ ಸಾಧಾರಣವಾಗಿದ್ದು, ಮುಂದಿನ ಗುರುವಾರ ಮತ್ತು ಶುಕ್ರವಾರ (ಜೂನ್ 10 ಮತ್ತು 11) ಮಳೆ ಆರ್ಭಟ ಜೋರಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಕರಾವಳಿ ಜಿಲ್ಲೆಗಳಲ್ಲಿ ಈ ಮಧ್ಯೆ ಸಾಮಾನ್ಯ ಮಳೆಯಾಗುವ ಅಂದಾಜಿದೆ.

ವಾಡಿಕೆಯಂತೆ ಮುಂಗಾರು 2021 ಕರ್ನಾಟಕದಲ್ಲಿ ಕಳೆದ ವಾರ ಕಾಲಿಟ್ಟಿದ್ದು, ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದೆ. ಆದರೆ ರಾಜ್ಯದಲ್ಲಿ ಇಂದಿನಿಂದ ಜೂನ್ 11ರವರೆಗೆ ಮಳೆ ಹೆಚ್ಚಳವಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡಿನಲ್ಲಿಯೂ ಮಳೆ ಉತ್ತಮವಾಗಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಈ ಭಾಗಗಳಲ್ಲಿ ಮುಂಗಾರು ಆಗಮನವಾದ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ.

ಜೂನ್ 3ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿದ್ದು, ಕರ್ನಾಟಕಕ್ಕೆ ಜೂನ್ 5ಕ್ಕೆ ಪ್ರವೇಶವಾಗಿದೆ. ಅದರ ಪರಿಣಾಮವಾಗಿ ಮಲೆನಾಡು, ಕರ್ನಾಟಕದ ಕರಾವಳಿ ತೀರದಲ್ಲೂ ವ್ಯಾಪಕ ಮಳೆಯಾಗುತ್ತಿದೆ. ಆದರೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆ ಸಾಧಾರಣವಾಗಿದೆ. ಈ ಮಧ್ಯೆ ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ, ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ಹೇಳಿವೆ. ಮುಂಗಾರು ಮಳೆ ಉತ್ತಮವಾಗಿ ಆಗುತ್ತಿರುವುದರಿಂದ ಕರ್ನಾಟಕದಲ್ಲಿ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

(Monsoon 2021 rains Today on June 8 in Karnataka and Bangalore)

Monsoon 2021: ಇಂದಿನಿಂದ ಕೇರಳದಲ್ಲಿ ಮುಂಗಾರು; ಹವಾಮಾನ ಇಲಾಖೆ ಮುಂಗಾರು ಲೆಕ್ಕಾಚಾರದ ಹನಿ ಹನಿ ಮಾಹಿತಿ ಇಲ್ಲಿದೆ

Published On - 10:46 am, Tue, 8 June 21

‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್