Karnataka Weather: ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಇನ್ನು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಮಂಚಿಕೆರೆ, ಗದಗ, ಅಡಕಿ, ಕಮಲಾಪುರ, ಮಂಡಗದ್ದೆ, ಕ್ಯಾಸಲ್ರಾಕ್, ಗುಂಜಿ, ಸೇಡಬಲ್, ಸೇಡಂ, ಚಿತ್ತಾಪುರ, ಮುದಗಲ್, ಸಂಡೂರು, ಶಿವಮೊಗ್ಗ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲಿನ ವಾತಾವರಣವಿರಲಿದ್ದು, ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಎಚ್ಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ತಮಿಳುನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ, ಡೆಲ್ಟಾ ಜಿಲ್ಲೆಗಳು ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಚೆನ್ನೈ ಮತ್ತು ಉಪನಗರಗಳಲ್ಲೂ ಭಾರೀ ಮಳೆಯಾಗುತ್ತಿದೆ.
ಮತ್ತಷ್ಟು ಓದಿ: Karnataka Weather: ಸೆಪ್ಟೆಂಬರ್ 6ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ತಿರುಚ್ಚಿ, ಕುಂಭಕೋಣಂ, ನೆಲ್ಲೈ, ತೂತುಕುಡಿ, ಕೋವಿಲ್‌ಪಟ್ಟಿ, ಥೇಣಿ, ಸೇಲಂ, ಅರಿಯಲೂರು, ದಿಂಡಿಗಲ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದ್ದರೆ, ತಮಿಳುನಾಡಿನ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಪ್ರದೀಪ್ ಜಾನ್ ತಿಳಿಸಿದ್ದಾರೆ.
ಮುಂದಿನ ವಾರ ಚೆನ್ನೈ ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಮಿಳುನಾಡು ವೆದರ್‌ಮ್ಯಾನ್ ಹೇಳಿದ್ದರೆ, ಹವಾಮಾನ ಕೇಂದ್ರ ತಿಳಿಸಿದೆ.
ಕೊಯಮತ್ತೂರು, ಥೇಣಿ, ದಿಂಡಿಗಲ್, ತೆಂಕಾಸಿ, ವಿರುಧುನಗರ, ಮಧುರೈ, ಶಿವಗಂಗೈ, ಪುದುಕೊಟ್ಟೈ ಮತ್ತು ತಂಜಾವೂರು ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ