Karnataka Rains: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯ ಆರ್ಭಟ ಜೋರು

ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯ ಆರ್ಭಟ ಜೋರು
ಮಳೆ
Image Credit source: Times Now

Updated on: Jul 11, 2023 | 7:28 AM

ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕ್ಯಾಸಲ್ ರಾಕ್, ಕೊಲ್ಲೂರು, ಕಾರ್ಕಳ, ಕೋಟ, ಸಿದ್ದಾಪುರ, ಕುಮಟಾ, ಕಾರವಾರ, ಶಿರಾಲಿ, ಗೇರುಸೊಪ್ಪ, ಧರ್ಮಸ್ಥಳ, ಸುಬ್ರಹ್ಮಣ್ಯ, ಬೆಳ್ತಂಗಡಿ, ಕೊಟ್ಟಿಗೆಹಾರ, ಜಾನ್ಮನೆ, ಸಿದ್ದಾಪುರ, ಮಂಕಿ, ಹೊನ್ನಾವರ, ಗೋಕರ್ಣ, ಕುಂದಾಪುರ, ಅಕ್ಕಿಆಲೂರು, ಕಿರವತ್ತಿ, ಮುಲ್ಕಿ, ಮಾಣಿ, ಗುಬ್ಬಿ, ಕಮ್ಮರಡಿ, ಎನ್​ಆರ್​ಪುರ, ಜಯಪುರ, ಸಕಲೇಶಪುರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rains: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಭಾರಿ ಮಳೆಯ ಮುನ್ಸೂಚನೆ

ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us