Monsoon 2023: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 30ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Monsoon 2023: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: India Today

Updated on: Jun 26, 2023 | 7:28 AM

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 30ರವರೆಗೆ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್(Yellow Alert)​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ,ಯಾದಗಿರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕುಂದಾಪುರ, ಕೋಟ, ಮಂಕಿ, ಸಿದ್ದಾಪುರ, ಹೊನ್ನಾವರ, ಶಿರಾಲಿ, ಗೇರುಸೊಪ್ಪ, ಅಂಕೋಲಾ, ಕಾರ್ಕಳದಲ್ಲಿ ಭಾರಿ ಮಳೆಯಾಗಿದೆ. ಕುಮಟಾ, ಕಾರವಾರ, ಗೋಕರ್ಣ, ಜೇವರ್ಗಿ, ಕದ್ರಾ, ಕ್ಯಾಸಲ್​ ರಾಕ್, ಚಿಂಚೋಳಿ, ಚಿತ್ತಾಪುರ, ಕೊಲ್ಲೂರು, ಪಣಂಬೂರು, ಕಮಲಾಪುರ, ಲಿಂಗನಮಕ್ಕಿ, ಮಂಗಳೂರ ವಿಮಾನ ನಿಲ್ದಾಣ, ಬನವಾಸಿ, ನಾರಾಯಣಪುರ, ಕಮ್ಮರಡಿ, ಮಾಣಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು, ಸಿಂದಗಿ, ಸೇಡಂ, ಸೈದಾಪುರ, ಕಳಸ, ಶೃಂಗೇರಿ, ಮುಲ್ಕಿ, ಉಪ್ಪಿನಂಗಡಿ, ಸುಳ್ಯ, ಧರ್ಮಸ್ಥಳ, ಮುಂಡಗೋಡ, ಸವಣೂರು, ಬೀದರ್, ಮುದಗಲ್, ಭಾಲ್ಕಿ, ಬಸವನಬಾಗೇವಾಡಿ, ಇಂಡಿ, ಕಲಘಟಗಿ, ಖಜೂರಿ, ಲೋಕಾಪುರ, ಹುಂಚದಕಟ್ಟೆ, ಆನವಟ್ಟಿ, ತ್ಯಾಗರ್ತಿ, ಕೊಪ್ಪ. ಕೊಟ್ಟಿಗೆಹಾರ, ಜಯಪುರ, ಹರಪನಹಳ್ಳಿ, ಭಾಗಮಂಡಲದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಮುಂಗಾರು ಚುರುಕು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​

ಕರಾವಳಿಯ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಹಲು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us