AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಮಳೆರಾಯ, ಕರಾವಳಿ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಮಳೆ ಕೊಂಚ ಬಿಡುವು ಪಡೆದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಮಳೆರಾಯ, ಕರಾವಳಿ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ
ಮಳೆImage Credit source: Mint
ನಯನಾ ರಾಜೀವ್
|

Updated on:Jul 31, 2023 | 7:37 AM

Share

ಕರ್ನಾಟಕದಾದ್ಯಂತ ಮಳೆ ಕೊಂಚ ಬಿಡುವು ಪಡೆದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸುಬ್ರಹ್ಮಣ್ಯ, ಕೊಲ್ಲೂರು, ಕ್ಯಾಸಲ್​ರಾಕ್, ಗೇರುಸೊಪ್ಪ, ಕಾರ್ಕಳ, ಬೆಳ್ತಂಗಡಿ, ಧರ್ಮಸ್ಥಳ, ಉಡುಪಿ, ಶೃಂಗೇರಿ, ತಾಳಗುಪ್ಪ, ಲಿಂಗನಮಕ್ಕಿ, ಉಪ್ಪಿನಂಗಡಿ, ಪುತ್ತೂರು, ಕುಂದಾಪುರ, ಕೋಟ, ಮಂಕಿ, ಶಿರಾಲಿ, ಸಿದ್ದಾಪುರ, ಲೋಂಡಾ, ಜಯಪುರ, ಭಾಗಮಂಡಲ, ಕದ್ರಾ, ಹೊನ್ನಾವರ, ಮಾಣಿ, ಪಣಂಬೂರು, ಕಮ್ಮರಡಿ, ಕಳಸ, ಸೋಮವಾರಪೇಟೆ, ಹುಂಚದಕಟ್ಟೆ, ಬಳ್ಳಾರಿಯಲ್ಲೂ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಆಗಾಗ ಸೂರ್ಯ ಗೋಚರಿಸಲಿದ್ದಾನೆ, ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Published On - 8:02 am, Sun, 30 July 23

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!