ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ತುಮಕೂರು, ವಿಜಯನಗರ, ಹಾಸನ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕ್ಯಾಸಲ್ ರಾಕ್ನಲ್ಲಿ 7 ಸೆಂ.ಮೀನಷ್ಟು ಮಳೆಯಾಗಿದೆ. ಕದ್ರಾ, ಅಂಕೋಲಾ, ಕುಮಟಾ, ಲಿಂಗನಮಕ್ಕಿ, ಶೃಂಗೇರಿ, ಮಂಚಿಕೆರೆ, ಗೇರುಸೊಪ್ಪ, ಕೋಟ, ತಾಳಗುಪ್ಪ, ಶಿರಾಲಿ, ಯಲ್ಲಾಪುರ, ಮಂಕಿ, ಸಿದ್ದಾಪುರ, ಕುಂದಾಪುರ, ಕೊಲ್ಲೂರು, ಜಯಪುರ, ಗೋಕರ್ಣ, ಹೊನ್ನಾವರ, ಪಣಂಬೂರು, ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ಮಂಗಳೂರು ವಿಮಾನ ನಿಲ್ದಾಣ, ಸಿಂಧನೂರು, ತ್ಯಾಗರ್ತಿ, ಕಮ್ಮರಡಿ, ಸಂತೆ ಬೆನ್ನೂರು, ಕಾರವಾರ, ಬನವಾಸಿ, ಉಪ್ಪಿನಂಗಡಿ, ಪುತ್ತೂರು, ಮುಲ್ಕಿ, ಮಾಣಿ, ಕಲಘಟಗಿ, ಸವಣೂರು, ಜೇವರ್ಗಿ, ಕೊಪ್ಪ, ಬಾಳೆಹೊನ್ನೂರು, ಮಧುಗಿರಿ, ಚಿತ್ರದುರ್ಗ, ಹೊಸಕೋಟೆ, ಹೆಸರಘಟ್ಟ, ಆನವಟ್ಟಿಯಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Monsoon 2023: ಕರ್ನಾಟಕದ 4 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಒಂದೆರಡು ಸಲ ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ