Karnataka Rains: ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 27ರವರೆಗೆ ಭಾರಿ ಮಳೆ

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 27ರವರೆಗೆ ಭಾರಿ ಮಳೆ
ಮಳೆImage Credit source: Mint
Follow us
ನಯನಾ ರಾಜೀವ್
|

Updated on: Jul 23, 2023 | 8:10 AM

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಹಾಸನ, ಯಾದಗಿರಿ, ಕಲಬರಗಿ, ಧಾರವಾಡ, ಬೆಳಗಾವಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿತ್ತು, ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು. ಕ್ಯಾಸಲ್​ರಾಕ್, ಯಲ್ಲಾಪುರ, ಕಾರ್ಕಳ, ಸಿದ್ದಾಪುರ,ಕದ್ರಾ, ಮಂಚಿಕೆರೆ, ಜೋಯಿಡಾ, ಲೋಂಡಾ, ಶೃಂಗೇರಿ, ಕೊಪ್ಪ, ಕೊಲ್ಲೂರು, ಜಯಪುರ, ಲಿಂಗನಮಕ್ಕಿ, ಗೇರುಸೊಪ್ಪ, ಸಿದ್ದಾಪುರ, ಬೆಳ್ತಂಗಡಿ, ತಾಳಗುಪ್ಪ, ಕಮ್ಮರಡಿ, ಕೊಟ್ಟಿಗೆಹಾರ, ಸೋಮವಾರಪೇಟೆ, ಪುತ್ತೂರು, ಧರ್ಮಸ್ಥಳದಲ್ಲಿ ಭಾರೀ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Weather: ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಎರಡು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬನವಾಸಿ, ಅಫಜಲಪುರ, ಹಾನಗಲ್, ಹಳಿಯಾಳ, ಕಿರವತ್ತಿ, ಶಿರಾಲಿ, ಕಾರವಾರ, ಅಂಕೋಲಾ, ಬೇಲಿಕೇರಿ, ಕಲಬುರಗಿ, ಕಲಘಟಗಿ, ಸಕಲೇಶಪುರ, ಹುಂಚದಕಟ್ಟೆ, ಭಾಗಮಂಡಲ, ಕಳಸ, ಅಕ್ಕಿಆಲೂರು, ಆನವಟ್ಟಿ, ಬಾಳೆಹೊನ್ನೂರು, ಶನಿವಾರಸಂತೆ, ಮುಂಡಗೋಡ, ಕುಮಟಾ, ಹೊನ್ನಾವರ, ಮಾಣಿ, ಸುಳ್ಯ, ಉಡುಪಿ, ಬೆಳಗಾವಿ, ಅಡಕ, ಮುಧೋಳ, ಕಮಲಾಪುರ, ಶಿವಮೊಗ್ಗ, ನಿಪ್ಪಾಣಿ, ಹಿರೆಕೆರೂರು, ಸಂಕೇಶ್ವರ, ಅಥಣಿ, ತರೀಕೆರೆ, ಪಣಂಬೂರು, ಸೈದಾಪುರ, ಪೊನ್ನಂಪೇಟೆ, ರಾಯಬಾಗ, ಚಿಕ್ಕೋಡಿ, ಹುಕ್ಕೇರಿ, ಬೈಲಹೊಂಗಲ, ಅಣ್ಣಿಗೆರೆ, ರಾಯಚೂರು, ಹುಮನಾಬಾದ್, ಸಿಂಧನೂರು, ಬಾಗಲಕೋಟೆ, ದಾವಣಗೆರೆ, ಅಜ್ಜಂಪುರ, ಚಿಕ್ಕಮಗಳೂರು, ಹರಪನಹಳ್ಳಿ, ಸರಗೂರಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ