Monsoon 2023: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Monsoon 2023: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ
ಮಳೆ
Image Credit source: India Today

Updated on: Jun 27, 2023 | 7:36 AM

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದರೆ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಮತ್ತಷ್ಟು ಓದಿ:Monsoon 2023: ಕರ್ನಾಟಕದಲ್ಲಿ ಚುರುಕುಗೊಂಡ ಮುಂಗಾರು, ಮುಂದಿನ 48 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

ಹೊನ್ನಾವರ ಹಾಗೂ ಮಂಕಿಯಲ್ಲಿ ಭಾರಿ ಮಳೆಯಾಗಿದೆ, ಕಾರ್ಕಳ, ಗೇರುಸೊಪ್ಪ, ಅಂಕೋಲ, ಉಡುಪಿ, ಕುಮಟಾ, ಕ್ಯಾಸಲ್ ರಾಕ್, ಕಾರವಾರ, ಗೋಕರ್ಣ, ಬೇಲಿಕೇರಿ, ಮುಲ್ಕಿ, ಮಂಗಳೂರು, ಪಣಂಬೂರು, ಕೋಟ, ಸಿದ್ದಾಪುರ, ಶಿರಾಲಿ, ಮಂಗಳೂರು ವಿಮಾನ ನಿಲ್ದಾಣ, ಲೋಂಡಾ, ದೇವದುರ್ಗ, ಕೊಟ್ಟಿಗೆಹಾರ, ಕದ್ರಾ, ಮಂಚಿಕೆರೆ ಧರ್ಮಸ್ಥಳ, ಚಿತ್ತಾಪುರ, ಇಳಕಲ್, ಲೋಕಾಪುರ, ತಾಳಿಕೋಟೆ, ಶಹಪುರ, ಕಲಘಟಗಿ, ಹುಣಸೂರು, ಕಂಪ್ಲಿ, ಮಾಗಡಿ, ಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಶೃಂಗೇರಿ, ಕೊಪ್ಪ, ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ, ಗಂಗಾವತಿ, ಕುಂದಗೋಳ, ಬಾಗಲಕೋಟೆ, ಬೀದರ್, ಹೊಸಪೇಟೆ, ಹುಂಚದಕಟ್ಟೆ, ಸಿರುಗುಪ್ಪ, ಸಿರಾ, ಸಂತೆ ಬೆನ್ನೂರು, ಚಿಂತಾಮಣಿಯಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ