Monsoon 2023: ಕರ್ನಾಟಕದ 4 ಜಿಲ್ಲೆಗಳಿಗೆ ಮಳೆಯ ರೆಡ್​ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ

ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ.

Monsoon 2023: ಕರ್ನಾಟಕದ 4 ಜಿಲ್ಲೆಗಳಿಗೆ ಮಳೆಯ ರೆಡ್​ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ
ಮಳೆImage Credit source: Mint
Follow us
ನಯನಾ ರಾಜೀವ್
|

Updated on: Jul 02, 2023 | 8:19 AM

ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಜುಲೈ 6 ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೊಷಿಸಲಾಗಿದೆ. ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕಾರವಾರ ಹಾಗೂ ಕಾರ್ಕಳದಲ್ಲಿ ಅಧಿಕ ಮಳೆಯಾಗಿದೆ, ಕೋಟ, ಮಂಕಿ, ಬಿಳಿಕೇರಿ, ಕ್ಯಾಸಲ್​ರಾಕ್, ಶಿರಾಲಿ, ಧರ್ಮಸ್ಥಳ, ಮಂಗಳೂರು, ಪಣಂಬೂರು, ಗೇರುಸೊಪ್ಪ, ಗೋಕರ್ಣ, ಕದ್ರ, ಬೆಳ್ತಂಗಡಿ, ಪುತ್ತೂರು, ಕೊಲ್ಲೂರು, ಹೊನ್ನಾವರ, ಕುಂದಾಪುರ, ಅಂಕೋಲ, ಯಲ್ಲಾಪುರ, ಕೊಪ್ಪ, ಸಕಲೇಶಪುರ, ತಾಳಗುಪ್ಪ, ಚಿಂತಾಮಣಿ, ಸುಳ್ಯ, ಉಪ್ಪಿನಂಗಡಿ, ಸಿದ್ದಾಪುರ, ಮಂಚಿಕೆರೆ, ಕಿರವತ್ತಿ, ನಾಪೋಕ್ಲು, ಸುಂಟಿಕೊಪ್ಪ, ವಿರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ, ಲಿಂಗನಮಕ್ಕಿ, ಹುಂಚದಕಟ್ಟೆ, ತ್ಯಾಗರ್ತಿ, ಕಳಸ, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೆ ಭಾರಿ ಮಳೆ

ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಬೀಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ