Monsoon 2023: ಕರ್ನಾಟಕದ 4 ಜಿಲ್ಲೆಗಳಿಗೆ ಮಳೆಯ ರೆಡ್​ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ

ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ.

Monsoon 2023: ಕರ್ನಾಟಕದ 4 ಜಿಲ್ಲೆಗಳಿಗೆ ಮಳೆಯ ರೆಡ್​ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ
ಮಳೆ
Image Credit source: Mint

Updated on: Jul 02, 2023 | 8:19 AM

ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಜುಲೈ 6 ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೊಷಿಸಲಾಗಿದೆ. ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಕಾರವಾರ ಹಾಗೂ ಕಾರ್ಕಳದಲ್ಲಿ ಅಧಿಕ ಮಳೆಯಾಗಿದೆ, ಕೋಟ, ಮಂಕಿ, ಬಿಳಿಕೇರಿ, ಕ್ಯಾಸಲ್​ರಾಕ್, ಶಿರಾಲಿ, ಧರ್ಮಸ್ಥಳ, ಮಂಗಳೂರು, ಪಣಂಬೂರು, ಗೇರುಸೊಪ್ಪ, ಗೋಕರ್ಣ, ಕದ್ರ, ಬೆಳ್ತಂಗಡಿ, ಪುತ್ತೂರು, ಕೊಲ್ಲೂರು, ಹೊನ್ನಾವರ, ಕುಂದಾಪುರ, ಅಂಕೋಲ, ಯಲ್ಲಾಪುರ, ಕೊಪ್ಪ, ಸಕಲೇಶಪುರ, ತಾಳಗುಪ್ಪ, ಚಿಂತಾಮಣಿ, ಸುಳ್ಯ, ಉಪ್ಪಿನಂಗಡಿ, ಸಿದ್ದಾಪುರ, ಮಂಚಿಕೆರೆ, ಕಿರವತ್ತಿ, ನಾಪೋಕ್ಲು, ಸುಂಟಿಕೊಪ್ಪ, ವಿರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ, ಲಿಂಗನಮಕ್ಕಿ, ಹುಂಚದಕಟ್ಟೆ, ತ್ಯಾಗರ್ತಿ, ಕಳಸ, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೆ ಭಾರಿ ಮಳೆ

ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಬೀಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us