Karnataka Weather: ಕರ್ನಾಟಕದಾದ್ಯಂತ ಮುಂಗಾರು ದುರ್ಬಲ, ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ

ಕರ್ನಾಟಕದಾದ್ಯಂತ ಮುಂಗಾರು ದುರ್ಬಲವಾಗಿದ್ದು, ಕೆಲವೇ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಕರ್ನಾಟಕದಾದ್ಯಂತ ಮುಂಗಾರು ದುರ್ಬಲ, ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ
ಮಳೆ

Updated on: Aug 15, 2023 | 12:00 PM

ಕರ್ನಾಟಕದಾದ್ಯಂತ ಮುಂಗಾರು ದುರ್ಬಲವಾಗಿದ್ದು, ಕೆಲವೇ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ.

ಎಲೆಕ್ಟ್ರಾನಿಕ್​ ಸಿಟಿ, ಕ್ಯಾಸಲ್ ರಾಕ್, ಕಾರ್ಕಳ, ಸಿದ್ದಾಪುರ, ಮಂಗಳೂರು ವಿಮಾನ ನಿಲ್ದಾಣ, ಭಾಗಮಂಡಲದಲ್ಲಿ ಮಳೆಯಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ, ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಬಿಸಿಲು ಕೂಡ ಇದೆ. ಎಚ್​ಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 20ರವರೆಗೆ ಧಾರಾಕಾರ ಮಳೆ ಸಾಧ್ಯತೆ

ಹಿಮಾಚಲ ಪ್ರದೇಶದಲ್ಲಿ ಮಳೆ

ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಹಾನಿಯ ನಡುವೆ, ಹವಾಮಾನ ಕೇಂದ್ರ ಶಿಮ್ಲಾ ರಾಜ್ಯದಲ್ಲಿ ಇಂದು ಭಾರೀ ಮಳೆಗಾಗಿ ರೆಡ್ ಅಲರ್ಟ್ ಘೋಷಿಸಿದೆ.
ಆದರೆ, ಬೆಳಗ್ಗೆ ಹೊರಡಿಸಿದ ಹವಾಮಾನ ಬುಲೆಟಿನ್ ನಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಆದರೆ ಮಧ್ಯಾಹ್ನ 3.35 ರ ಸುಮಾರಿಗೆ ಬಿಡುಗಡೆಯಾದ ಹವಾಮಾನ ಮುನ್ಸೂಚನೆಯಲ್ಲಿ ಅದು ರೆಡ್ ಅಲರ್ಟ್​ ಆಗಿತ್ತು.

ಮಂಡಿ, ಶಿಮ್ಲಾ, ಸೋಲನ್ ಮತ್ತು ಸಿರ್ಮೌರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕುಲುಗೆ ಆರೆಂಜ್ ಅಲರ್ಟ್ ಇದ್ದರೆ, ಕಿನ್ನೌರ್ ಮತ್ತು ಲಾಹೌಲ್-ಸ್ಪಿಟಿಯಲ್ಲಿ ಹಳದಿ ಅಲರ್ಟ್ ಇದೆ.

ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರಲಾಗಿದೆ. ಪ್ರವಾಸಿಗರು ಸಂಬಂಧಪಟ್ಟ ಇಲಾಖೆಗಳು ನೀಡುವ ಸಲಹೆಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಲು ತಿಳಿಸಲಾಗಿದೆ. ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರಲಾಗಿದೆ. ಪ್ರವಾಸಿಗರು ಸಂಬಂಧಪಟ್ಟ ಇಲಾಖೆಗಳು ನೀಡುವ ಸಲಹೆಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಲು ತಿಳಿಸಲಾಗಿದೆ. ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹೇಳಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published On - 12:00 pm, Tue, 15 August 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us