Karnataka Rain: ಕರ್ನಾಟಕದ ಕರಾವಳಿಯಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯ ಮುನ್ಸೂಚನೆ

ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rain: ಕರ್ನಾಟಕದ ಕರಾವಳಿಯಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯ ಮುನ್ಸೂಚನೆ
ಮಳೆ
Image Credit source: English Jagaran
Edited By:

Updated on: Aug 22, 2023 | 8:35 AM

ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಇಂದಿನಿಂದ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ (Karnataka Rains). ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಂಕಿ, ಅಜ್ಜಂಪುರ, ಉಡುಪಿ, ಕಾರ್ಕಳ, ಕೋಟ, ಕೊಲ್ಲೂರು, ಮಂಗಳೂರು, ಮುಲ್ಕಿ, ಬಸವನ ಬಾಗೇವಾಡಿ, ಕ್ಯಾಸಲ್​ರಾಕ್, ದೇವರಹಿಪ್ಪರಗಿ, ಶಿರಾಲಿ, ಬೆಳ್ಳೂರು, ಸೇಡಂನಲ್ಲಿ ಮಳೆಯಾಗಿದೆ.

ನೈಋತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು, ಕರಾವಳಿಯ ಬಹುತೇಕ ಕಡೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್​ 27ರವರೆಗೆ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:55 am, Tue, 22 August 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us