ಹವಾಮಾನ ವರದಿ: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್​ 3 ರಿಂದ ಮತ್ತೆ ವರುಣನ ಆರ್ಭಟ ಶುರು

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್​ 3 ರಿಂದ ಮತ್ತೆ ವರುಣನ ಆರ್ಭಟ ಜೋರಾಗಲಿದೆ.

ಹವಾಮಾನ ವರದಿ: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್​ 3 ರಿಂದ ಮತ್ತೆ ವರುಣನ ಆರ್ಭಟ ಶುರು
ಮಳೆ
Image Credit source: DNA

Updated on: Aug 02, 2023 | 7:28 AM

ಬೆಂಗಳೂರು, ಆಗಸ್ಟ್​ 2:   ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್​ 3 ರಿಂದ ಮತ್ತೆ ವರುಣನ ಆರ್ಭಟ ಜೋರಾಗಲಿದೆ. ಇನ್ನುಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಸಿದ್ದಾಪುರ, ಕ್ಯಾಸಲ್​ ರಾಕ್, ಗೇರುಸೊಪ್ಪ, ಶೃಂಗೇರಿ, ಕಾರ್ಕಳ, ಬೆಳ್ತಂಗಡಿ, ಕದ್ರಾ, ಕೊಟ್ಟಿಗೆಹಾರ, ಕಮ್ಮರಡಿ, ಕೊಪ್ಪ, ಜಯಪುರ, ಕುಂದಾಪುರ, ಕೊಲ್ಲೂರು, ಹೊನ್ನಾವರ, ಸುಬ್ರಹ್ಮಣ್ಯ, ಉಪ್ಪಿನಂಗಡಿ, ಪುತ್ತೂರು, ಮಂಚಿಕೆರೆ, ಕುಮಟಾ, ಶಿರಾಲಿ, ಮಂಕಿ, ಬೇಲಿಕೇರಿ, ಲೋಂಡಾ, ಜೇವರ್ಗಿ, ತಾಳಗುಪ್ಪ, ಸುಳ್ಯ, ಮುಲ್ಕಿ, ಕೋಟ, ಗುಂಜಿ, ಕಮಲಾಪುರ, ಅಫಜಲಪುರ, ಬಿಳಗಿ, ಹಾವೇರಿ, ಪಿಟಿಒ, ಬಸವನ ಬಾಗೇವಾಡಿ, ಸೋಮವಾರಪೇಟೆ, ಭಾಗಮಂಡಲ, ಶನಿವಾರಸಂತೆ, ಕಳಸ, ಬಾಳೆಹೊನ್ನೂರು, ಸಕಲೇಶಪುರ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 7ರವರೆಗೆ ಭಾರಿ ಮಳೆ

ಕರ್ನಾಟಕದ ಕರಾವಳಿಯು ಬಿರುಗಾಳಿಯು ಗಂಟೆಗೆ 45-55 ಕಿ.ಮೀ ವೇಗದಲ್ಲಿ ಬೀಸಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಕಳೆದ ಒಂದು ವಾರದಿಂದ ಚಳಿ ಇದೆ, ಬಿಸಿಲು ಕೂಡ ಇದೆ.

ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us