ಆಗಸ್ಟ್ 3ರ ನಂತರ ಕರ್ನಾಟಕದ ಕರಾವಳಿ ಭಾಗದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಳ ಸಾಧ್ಯತೆ

ಕರ್ನಾಟಕದ ಕರಾವಳಿ ಭಾಗಗಳಲ್ಲಿ ಆಗಸ್ಟ್ 3ರ ನಂತರ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 3ರ ನಂತರ ಕರ್ನಾಟಕದ ಕರಾವಳಿ ಭಾಗದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಳ ಸಾಧ್ಯತೆ
ಮಳೆ
Image Credit source: Indian Express
Edited By:

Updated on: Jul 31, 2023 | 10:48 AM

ಕರ್ನಾಟಕದ ಕರಾವಳಿ ಭಾಗಗಳಲ್ಲಿ ಆಗಸ್ಟ್ 3ರ ನಂತರ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಇನ್ನುಳಿದಂತೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಂಕಿ, ಮಾಣಿ, ಪುತ್ತೂರು, ಧರ್ಮಸ್ಥಳ, ಕ್ಯಾಸಲ್​ ರಾಕ್, ಕುಂದಾಪುರ, ಸಿದ್ದಾಪುರ, ಕೊಲ್ಲೂರು, ಗೇರುಸೊಪ್ಪ, ಅಂಕೋಲಾ, ಶಿರಾಲಿ, ಮಂಗಳೂರು ವಿಮಾನ ನಿಲ್ದಾಣ, ಲಿಂಗನಮಕ್ಕಿ, ಶೃಂಗೇರಿ, ಉಪ್ಪಿನಂಗಡಿ, ಪಣಂಬೂರು, ಸುಳ್ಯ, ಬೆಳ್ತಂಗಡಿ, ಜೋಯಿಡಾ, ಕದ್ರಾ, ಕಾರವಾರ, ಗೋಕರ್ಣ, ಮಂಚಿಕೆರೆ, ಹೊನ್ನಾವರ, ಕುಮಟಾ, ಕೋಟ, ಕಾರ್ಕಳ, ಚಿತ್ತಾಪುರ, ಆಳಂದ, ಲೋಂಡಾ, ಶಹಪುರ, ತಾಳಗುಪ್ಪ, ಭಾಗಮಂಡಲ, ಜಯಪುರ, ಬಾಳೆಹೊನ್ನೂರು, ಕೊಪ್ಪ, ಕಮ್ಮರಡಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಮಳೆರಾಯ, ಕರಾವಳಿ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ

ಕರಾವಳಿಯ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗಲಿದೆ, ಎಚ್​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:38 am, Mon, 31 July 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us