Karnataka Rains: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ, ಜೂನ್ 2ರಿಂದ ಮಳೆ ಜೋರು
ಕರ್ನಾಟಕಕ್ಕೆ ಶೀಘ್ರ ಮುಂಗಾರು ಶೀಘ್ರ ಪ್ರವೇಶವಾಗಲಿದ್ದು, ಜೂನ್ 2ರಂದು ವಿವಿಧ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ಕರ್ನಾಟಕಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶವಾಗಲಿದ್ದು ಜೂನ್ 2ರಿಂದ ರಾಜ್ಯದೆಲ್ಲೆಡೆ ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆ ಶುರುವಾಗಲಿದೆ. ಮಂಗಳೂರು, ಧರ್ಮಸ್ಥಳ, ಪಣಂಬೂರು, ಮಾಣಿ, ಪುತ್ತೂರು, ಉಡುಪಿ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ
ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಹಾವೇರಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ರಾಯಚೂರಿನಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ