Karnataka Rains: ಇಂದು ಕರ್ನಾಟಕದ ಕರಾವಳಿ, ಕೊಡಗು, ಶಿವಮೊಗ್ಗ ಸೇರಿ ಹಲವೆಡೆ ಭಾರಿ ಮಳೆ

ಕರ್ನಾಟಕದಾದ್ಯಂತ ಜೂನ್ 2ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಲಿದೆ.

Karnataka Rains: ಇಂದು ಕರ್ನಾಟಕದ ಕರಾವಳಿ, ಕೊಡಗು, ಶಿವಮೊಗ್ಗ ಸೇರಿ ಹಲವೆಡೆ ಭಾರಿ ಮಳೆ
ಮಳೆ

Updated on: May 27, 2025 | 7:29 AM

ಬೆಂಗಳೂರು, ಮೇ 27: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದೆ. ಇಂದು ಕರ್ನಾಟಕದ ಕರಾವಳಿ, ಕೊಡಗು, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರಿನಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೆಡ್ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ಭಾಗಮಂಡಲ, ನಾಪೋಕ್ಲು, ಮುಲ್ಕಿ, ಸುಳ್ಯ, ಧರ್ಮಸ್ಥಳ, ಮಂಗಳೂರು, ಗೇರುಸೊಪ್ಪ, ಉಪ್ಪಿನಂಗಡಿ, ಆಗುಂಬೆ, ಸೋಮವಾರಪೇಟೆಯಲ್ಲಿ ಭಾರಿ ಮಳೆಯಾಗಿದೆ. ಮಾಣಿ, ನಿಪ್ಪಾಣಿ, ಕಾರ್ಕಳ, ಪಣಂಬೂರು, ಕದ್ರಾ, ಹೊನ್ನಾವರ, ಅಣ್ಣಿಗೆರೆ, ಪೊನ್ನಂಪೇಟೆ, ಕಳಸ, ಕುಶಾಲನಗರ, ಬಂಡೀಪುರ, ಜಯಪುರ, ಶೃಂಗೇರಿ, ಹಾರಂಗಿ, ಕೊಪ್ಪ, ನರಗುಂದ, ಕಾರವಾರ, ಚಿಕ್ಕೋಡಿ, ದೇವರಹಿಪ್ಪರಗಿ, ಎಚ್​ಡಿ ಕೋಟೆ, ಹುಣಸೂರು, ಅರಕಲಗೂಡು, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ:ಕರ್ನಾಟಕದ ಕರಾವಳಿ ಸೇರಿ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​, ಮುಂಗಾರು ಅಬ್ಬರ ಶುರುವಾಯ್ತಾ?

ಕೃಷ್ಣರಾಜಪೇಟೆ, ಕೆಆರ್​ ನಗರ, ಹಿಡಕಲ್, ಸಂಕೇಶ್ವರ, ಇಂಡಿ, ಗೋಕಾಕ್, ಜೋಯ್ಡಾ, ಮಂಕಿ, ಕುಂದಾಪುರ, ಸಿದ್ದಾಪುರ, ಅಥಣಿ, ಹುಂಚದಕಟ್ಟೆ, ಕೋಣನೂರು, ಬೇಗೂರು, ಚನ್ನರಾಯಪಟ್ಟಣ, ನಾಗಮಂಗಲ, ಶ್ರೀರಂಗಪಟ್ಟಣ, ಅಜ್ಜಂಪುರ, ಮದ್ದೂರು, ಇಳಕಲ್, ಕುಮಟಾ, ಬನವಾಸಿ, ಮಾನ್ವಿ, ಕಿರವತ್ತಿ, ಆಲಮಟ್ಟಿ, ಸಿಂಧನೂರು, ಶಾಹಪುರ್, ಮಹಾಲಿಂಗಪುರ, ಬಸವನಬಾಗೇವಾಡಿ, ಹಾವೇರಿ, ರಬಕವಿ, ಭಾಲ್ಕಿ, ಹಳಿಯಾಳ, ಮುದಗಲ್, ಕಡೂರು, ತರೀಕೆರೆ, ಬೆಳ್ಳೂರು, ಕನಕಪುರ, ಕಿಬ್ಬನಹಳ್ಳಿ, ತರೀಕೆರೆ, ಕುಣಿಗಲ್​, ಹೊನ್ನಾಳಿ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿದೆ.

ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.ಬೆಂಗಳೂರಿನ ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

​ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:27 am, Tue, 27 May 25

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us