AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸೇರಿ ದೇಶಾದ್ಯಂತ ಮುಂಗಾರು ಕೊರತೆ: 200 ಜಿಲ್ಲೆಗಳಲ್ಲಿ ಮಳೆಯ ತೀವ್ರ ಅಭಾವ

ಕರ್ನಾಟಕ ಸೇರಿದಂತೆ ದೇಶಾದ್ಯಂತ ಎಲ್ ನಿನೋ ಪರಿಣಾಮದಿಂದಾಗಿ ಮುಂಗಾರು ಆರಂಭದಲ್ಲೇ ಭೀಕರ ಮಳೆ ಕೊರತೆ ಎದುರಾಗಿದೆ. ಜೂನ್ ಮೊದಲ ಪರ್ವದಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಕೃಷಿ ವಲಯ ಕಂಗಾಲಾಗಿದೆ. ಪರಿಸ್ಥಿತಿ ಗಂಭೀರವಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರವು ಕೃಷ್ಣಾ ನದಿ ಪಾತ್ರದಲ್ಲಿ ಕೃಷಿ ಉದ್ದೇಶಗಳಿಗಾಗಿ ನೀರು ಪೂರೈಕೆ ಮಾಡುವುದನ್ನು ನಿಲ್ಲಿಸಿದೆ.

ಕರ್ನಾಟಕ ಸೇರಿ ದೇಶಾದ್ಯಂತ ಮುಂಗಾರು ಕೊರತೆ: 200 ಜಿಲ್ಲೆಗಳಲ್ಲಿ ಮಳೆಯ ತೀವ್ರ ಅಭಾವ
ಸಾಂದರ್ಭಿಕ ಚಿತ್ರImage Credit source: PTI
ಗಣಪತಿ ಶರ್ಮಾ
|

Updated on:Jun 16, 2026 | 7:12 AM

Share

ಬೆಂಗಳೂರು, ಜೂನ್ 16: ದೇಶಾದ್ಯಂತ ತಡವಾಗಿ ಪ್ರವೇಶಿಸಿದ ನೈಋತ್ಯ ಮುಂಗಾರು (Monsoon Rain) ಆರಂಭದಲ್ಲೇ ತೀವ್ರ ಹಿನ್ನಡೆ ಅನುಭವಿಸಿದೆ. ಎಲ್ ನಿನೋ (El Nino) ಮಾರಕ ಪರಿಣಾಮದಿಂದಾಗಿ ದೇಶದ ಸುಮಾರು 200 ಜಿಲ್ಲೆಗಳಲ್ಲಿ ಮಳೆಯ ತೀವ್ರ ಅಭಾವ ಸೃಷ್ಟಿಯಾಗಿದೆ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾಗಿದ್ದು, ಒಟ್ಟಾರೆ ಶೇಕಡಾ 32 ರಷ್ಟು ಇಳಿಕೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಆಘಾತಕಾರಿ ಮಾಹಿತಿ ನೀಡಿದೆ.

ಮುಖ್ಯಾಂಶಗಳು

  • ದೇಶದ 200 ಜಿಲ್ಲೆಗಳಲ್ಲಿ ಮಳೆ ಅಭಾವ
  • ಕೃಷ್ಣಾ ನದಿ ಪಾತ್ರದ ಕೃಷಿ ನೀರು ಬಂದ್
  • ಬಿತ್ತನೆ ಕಾರ್ಯವಾಗದೆ ಕಂಗಾಲಾದ ಅನ್ನದಾತರು

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮಧ್ಯ ಭಾರತದಲ್ಲಿ ಶೇ 57 ಹಾಗೂ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಶೇ 41 ರಷ್ಟು ಮಳೆ ಕೊರತೆಯಾಗಿದೆ. ದಕ್ಷಿಣ ಭಾರತದ ಕರ್ನಾಟಕ, ಕೇರಳ ಸೇರಿದಂತೆ ಪ್ರಮುಖ ರಾಜ್ಯಗಳಲ್ಲಿ ಶೇ 9 ರಷ್ಟು ಒಣ ಹವಾಮಾನ ವರದಿಯಾಗಿದೆ. ಅತಿ ಕಡಿಮೆ ಮಳೆಯಾದ ರಾಜ್ಯಗಳ ಪೈಕಿ ಗುಜರಾತ್ (ಶೇ 75 ಕೊರತೆ) ಮೊದಲ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರದಲ್ಲಿ ಶೇ 69 ರಷ್ಟು ಮಳೆ ಅಭಾವ ಕಂಡುಬಂದಿದೆ.

ಕರ್ನಾಟಕ ಗಡಿ ಭಾಗದಲ್ಲಿ ಕೃಷಿಗೆ ಕೃಷ್ಣಾ ನೀರು ಬಂದ್

ಜೈಪುರ ಮತ್ತು ಕೊಲ್ಹಾಪುರ ಭಾಗಗಳಲ್ಲಿ ಪರಿಸ್ಥಿತಿ ಕೈಮೀರಿದ್ದು, ಕೊಯ್ನಾ ಜಲಾಶಯದಿಂದ ಕರ್ನಾಟಕ ಗಡಿಯ ರಾಜಾಪುರ ಬ್ಯಾರೇಜ್‌ವರೆಗಿನ ಕೃಷ್ಣಾ ನದಿ ಪಾತ್ರದಲ್ಲಿ ಕೃಷಿಗಾಗಿ ನೀರು ಪೂರೈಸುವುದನ್ನು ಅಧಿಕಾರಿಗಳು ಸಂಪೂರ್ಣ ನಿಷೇಧಿಸಿದ್ದು, ಕೇವಲ ಕುಡಿಯುವ ನೀರಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ.

ಕರ್ನಾಟಕದಲ್ಲಿ ಮುಂಗಾರು ಕುಂಠಿತ: ಬಿತ್ತನೆ ಸ್ಥಗಿತ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳದ ಕಾರಣ ಬಿತ್ತನೆ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದೆ. ಬೀದರ್ ಜಿಲ್ಲೆಯಲ್ಲಿ ಕೇವಲ ಶೇಕಡಾ 5 ರಷ್ಟು ಮಳೆಯಾಗಿದ್ದು, ಶುಂಠಿ ನಾಟಿ ಮಾಡಿದ್ದ ರೈತರು ಬಾವಿ, ಬೋರ್‌ವೆಲ್‌ಗಳ ಅಂತರ್ಜಲ ಕುಸಿತದಿಂದಾಗಿ ಬೆಳೆ ಉಳಿಸಿಕೊಳ್ಳಲು ಹನಿ ನೀರಾವರಿ ಮೊರೆ ಹೋಗಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇತ್ತ ದಾವಣಗೆರೆಯಲ್ಲೂ ಸಾಲ ಸೂಲ ಮಾಡಿ ಭೂಮಿ ಹದಗೊಳಿಸಿದ ರೈತರು ಮಳೆ ಬಾರದೆ ಕಂಗಾಲಾಗಿದ್ದಾರೆ. ತುಂಗಭದ್ರಾ ನದಿಯಲ್ಲೂ ನೀರಿನ ಮಟ್ಟ ತಳ ತಲುಪಿದ್ದು, ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ.

ಇದನ್ನೂ ಓದಿ: ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಲ್ಲಿ 2 ದಿನ ಭಾರಿ ಮಳೆ ನಿರೀಕ್ಷೆ

ಮತ್ತೊಂದೆಡೆ, ಜಾಗತಿಕ ಸಂಘರ್ಷದ ಹಿನ್ನೆಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಹಾಗೂ ಮಳೆ ಕೊರತೆಯಿಂದ ರೈತರ ಆದಾಯ ಕುಂಠಿತಗೊಳ್ಳುತ್ತಿರುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳವಳ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:59 am, Tue, 16 June 26

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ