Karnataka Rains: ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಜೋರಿರಲಿದೆ ವರುಣನ ಆರ್ಭಟ, ಆರೆಂಜ್​ ಅಲರ್ಟ್​

|

Updated on: Jun 11, 2024 | 7:39 AM

ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆಯ ಆರ್ಭಟ ಶುರುವಾಗಿದೆ, ಇಂದು ಕರಾವಳಿ ಹಾಗೂ ಉತ್ತರ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಜೋರಿರಲಿದೆ ವರುಣನ ಆರ್ಭಟ, ಆರೆಂಜ್​ ಅಲರ್ಟ್​
ಮಳೆ
Follow us on

ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಕಾರವಾರ, ಅಂಕೋಲಾ, ಸಿಂದಗಿ, ದೇವರಹಿಪ್ಪರಗಿ, ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಕೋಟ, ಆಗುಂಬೆ, ಕುಂದಾಪುರ, ಉಡುಪಿ, ಕದ್ರಾ, ಸಿದ್ದಾಪುರ, ಪಣಂಬೂರು, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.
ಮಂಕಿ, ಬೆಳ್ತಂಗಡಿ, ಹೊನ್ನಾವರ, ಮುಲ್ಕಿ, ಜೇವರ್ಗಿ, ಇಂಡಿ, ಗೋಕರ್ಣ, ಮುದ್ದೇಬಿಹಾಳ, ಜಯಪುರ, ಕೊಪ್ಪ, ಕೊಟ್ಟಿಗೆಹಾರ, ಗೇರುಸೊಪ್ಪ, ಧರ್ಮಸ್ಥಳ, ಯಲ್ಲಾಪುರ, ವಿರಾಜಪೇಟೆ, ಹಳಿಯಾಳ, ಸುಳ್ಯ, ಮಾನ್ವಿ, ಬಾದಾಮಿ, ಗಂಗಾವತಿ, ಕೆಂಭಾವಿ, ನಾಪೋಕ್ಲು, ಕಮ್ಮರಡಿ, ಬಾಳೆಹೊನ್ನೂರು, ಮೂರ್ನಾಡು, ಬಾಗಲಕೋಟೆ, ಮುನಿರಾಬಾದ್, ಕೂಡಲಸಂಗಮ, ಕಂಪ್ಲಿ, ಹುಂಚದಕಟ್ಟೆ, ಚಿಂತಾಮಣಿ, ಹೊಸಪೇಟೆ, ತರೀಕೆರೆ, ಹಡಗಲಿ, ಕುಡತಿನಿ, ಅರಕಲಗೂಡು, ಭದ್ರಾವತಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Rains: ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ರೆಡ್​ ಅಲರ್ಟ್​ ಘೋಷಣೆ

ಹೊನ್ನಾವರದಲ್ಲಿ 26.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೊಪ್ಪಳದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 27.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ