AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಳಗಾವಿ, ಬೀದರ್, ರಾಯಚೂರು ಸೇರಿದಂತೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ನಿರೀಕ್ಷೆ

ಇಂದು ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ ಅತಿ ಹೆಚ್ಚಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿ ಎರಡು ವಾರಗಳು ಕಳೆದಿವೆ. ಎಲ್ಲೆಡೆ ಬಿಟ್ಟೂ ಬಿಡದೆ ಮಳೆ ಸುರಿಯದಿದ್ದರೂ ಆಗಾಗ ಮಳೆಯಾಗುತ್ತಿದೆ.

Karnataka Rains: ಬೆಳಗಾವಿ, ಬೀದರ್, ರಾಯಚೂರು ಸೇರಿದಂತೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ನಿರೀಕ್ಷೆ
ಮುಂಗಾರುImage Credit source: Holidify
ನಯನಾ ರಾಜೀವ್
|

Updated on: Jun 12, 2024 | 7:40 AM

Share

ಕರ್ನಾಟಕಕ್ಕೆ ಮುಂಗಾರಿನ ಪ್ರವೇಶವಾಗಿದೆ, ಅಲ್ಲಲ್ಲಿ ಮಳೆಯಾಗುತ್ತಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಕಲಬುರಗಿ, ಬೀದರ್, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಹೊನ್ನಾವರ, ಗೋಕರ್ಣ, ಕುಂದಾಪುರ, ಗೇರುಸೊಪ್ಪ, ಕೋಟ, ಮಂಗಳೂರು, ಕುಮಟಾ, ಶಿರಾಲಿ, ಸುಳ್ಯ, ಮಂಠಾಳ, ಲಿಂಗನಮಕ್ಕಿ, ಉಡುಪಿ, ಪುತ್ತೂರು, ಮಂಗಳೂರು, ಉಪ್ಪಿನಂಗಡಿ, ಸಿದ್ದಾಪುರ, ಧರ್ಮಸ್ಥಳ, ಮಾಣಿ, ಬೀದರ್, ಔರಾದ್, ಧರ್ಮಸ್ಥಳ, ಬಿಳಗಿ, ಭಾಗಮಂಡಲ, ಆಗುಂಬೆ, ಮುದಗಲ್, ಕಾರವಾರ, ಸೋಮವಾರಪೇಟೆ, ವಿರಾಜಪೇಟೆ, ಕಳಸ, ಕಮ್ಮರಡಿಯಲ್ಲಿ ಮಳೆಯಾಗಿದೆ.

ನಾಪೋಕ್ಲು, ರಬಕವಿ, ಕಮಲಾಪುರ, ತ್ಯಾಗರ್ತಿ, ಕೊಪ್ಪ, ಕುಶಾಲನಗರ, ಹುಂಚದಕಟ್ಟೆ, ಬಾಳೆಹೊನ್ನೂರು, ಬೆಳ್ಳೂರು, ಜಯಪುರ, ಶೃಂಗೇರಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ರೆಡ್​ ಅಲರ್ಟ್​ ಘೋಷಣೆ

ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ