Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದ ಕೃಷ್ಣ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಮುಂದುವರೆದಿದೆ. ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಮುಂಜಾಗ್ರತೆ ಕ್ರಮವಾಗಿ ಒಳಹರಿವಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹಾಗಾದರೆ ಜಲಾಶಯಗಕ್ಕೆ ಒಳಹರಿವು ಮತ್ತು ಹೊರಹರಿವು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಲಿಂಗನಮಕ್ಕಿ ಜಲಾಶಯ
Follow us
TV9 Web
| Updated By: ವಿವೇಕ ಬಿರಾದಾರ

Updated on: Aug 03, 2024 | 6:52 AM

ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಗೆ ಅಪಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳು ತುಂಬಿ ಹರಿಯುತ್ತಿವೆ. ಜಲಾಶಯಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಾಗಾದರೆ ಆಗಸ್ಟ್ 03ರಂದು ಕರ್ನಾಟಕದ ಪ್ರಮುಖ 14 ಜಲಾಶಯಗಳ ನೀರಿನ ಮಟ್ಟ (Karnataka Dam Water Level) ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 67.86 110.38 3,41,004 3,27,555
ತುಂಗಭದ್ರಾ ಜಲಾಶಯ (Tungabhadra Dam) 497.71 105.79 98.73 81.54 1,97,468 1,79,144
ಮಲಪ್ರಭಾ ಜಲಾಶಯ (Malaprabha Dam) 633.80 37.73 32.99 20.16 19,031 36,193
ಕೆ.ಆರ್.ಎಸ್ (KRS Dam) 38.04 49.45 46.03 35.30 98,910 99,018
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 138.42 69.77 51,961 3,570
ಕಬಿನಿ ಜಲಾಶಯ (Kabini Dam) 696.13 19.52 17.63 19.17 45,260 49,260
ಭದ್ರಾ ಜಲಾಶಯ (Bhadra Dam) 657.73 71.54 67.30 46.01 38,870 56,636
ಘಟಪ್ರಭಾ ಜಲಾಶಯ (Ghataprabha Dam) 662.91 51.00 98.73 81.54 1,97,468 1,79,144
ಹೇಮಾವತಿ ಜಲಾಶಯ (Hemavathi Dam) 890.58 37.10 35.08 30.09 27,126 23,325
ವರಾಹಿ ಜಲಾಶಯ (Varahi Dam) 594.36 31.10 18.83 10.72 5,202 0
ಹಾರಂಗಿ ಜಲಾಶಯ (Harangi Dam)​​ 871.38 8.50 7.36 8.17 10,683 5,833
ಸೂಫಾ (Supa Dam) 564.00 145.33 111.61 76.48 44,613 0
ನಾರಾಯಣಪುರ ಜಲಾಶಯ (Narayanpura Dam) 492.25 33.31 23.64 30.34 3,18,096 3,20,638
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.57 24.70 728 135

ಲಿಂಗನಮಕ್ಕೆ ಜಲಾಶಯಕ್ಕೆ ಬಹಳಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ಡ್ಯಾಂ ಬಹುಬೇಗ ತುಂಬುವ ಸಾಧ್ಯತೆ ಇದೆ. ಲಿಂಗನಮಕ್ಕಿ ಜಲಾಶಯದಲ್ಲಿ ಶನಿವಾರ 138 ಟಿಎಂಸಿ ನೀರು ಸಂಗ್ರಹವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ