Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಮಹರಾಷ್ಟ್ರ, ಕೇರಳ ಹಾಗೂ ಕರ್ನಾಟಕದ ಮಲೆನಾಡು ಮತ್ತು ಬೆಳಗಾವಿಯಲ್ಲಿ ಮಳೆ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದರಿಂದ ನದಿಗಳಿಗೆ ನೀರಿನ ಹರಿವು ಕಡಿಮೆಯಾಗಿದೆ. ಹಾಗಾದರೆ ರಾಜ್ಯದ ಜಲಾಶಯಗಳಲ್ಲಿ ಇಂದು ನೀರಿನ ಮಟ್ಟದ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ತುಂಗಭದ್ರಾ ಜಲಾಶಯ
Follow us
ವಿವೇಕ ಬಿರಾದಾರ
|

Updated on: Aug 05, 2024 | 7:13 AM

ಕಳೆದ ಒಂದು ವಾರದಿಂದ ತುಂಗಭದ್ರಾ ಜಲಾಯನ ಪ್ರದೇಶದಲ್ಲಿ ಪ್ರವಾಹ ಸ್ಥಿತಿ ಉಂಟಾಗಿತ್ತು. ಆದರೆ ಇದೀಗ ಮಲೆನಾಡಿನಲ್ಲಿ ಮಳೆ ಅಲ್ಪ ಕಡಿಮೆಯಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳ ಹರಿವು ತಗ್ಗಿದೆ. ಜಲಾಶಯಕ್ಕೆ 99 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ತುಂಗಭದ್ರಾ ಜಲಾಶಯ ಸೇರಿದಂತೆ ರಾಜ್ಯದ 14 ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ತಿಳಿಯಿರಿ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 73.63 117.04 3,13,387 2,64,012
ತುಂಗಭದ್ರಾ ಜಲಾಶಯ (Tungabhadra Dam) 497.71 105.79 98.88 84.30 1,36,574 1,26,692
ಮಲಪ್ರಭಾ ಜಲಾಶಯ (Malaprabha Dam) 633.80 37.73 33.25 20.95 34,440 34,440
ಕೆ.ಆರ್.ಎಸ್ (KRS Dam) 38.04 49.45 47.24 35.35 76,836 77,264
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 140.42 70.95 36,601 27,786
ಕಬಿನಿ ಜಲಾಶಯ (Kabini Dam) 696.13 19.52 17.83 18.91 19,606 14,517
ಭದ್ರಾ ಜಲಾಶಯ (Bhadra Dam) 657.73 71.54 64.18 46.82 19,512 29,894
ಘಟಪ್ರಭಾ ಜಲಾಶಯ (Ghataprabha Dam) 662.91 51.00 47.60 38.30 1,36,574 1,26,692
ಹೇಮಾವತಿ ಜಲಾಶಯ (Hemavathi Dam) 890.58 37.10 35.75 30.52 17,070 10,875
ವರಾಹಿ ಜಲಾಶಯ (Varahi Dam) 594.36 31.10 19.94 11.04 5,174 0
ಹಾರಂಗಿ ಜಲಾಶಯ (Harangi Dam)​​ 871.38 8.50 7.07 8.20 7,756 6,000
ಸೂಫಾ (Supa Dam) 564.00 145.33 116.95 77.88 29,577 4698
ನಾರಾಯಣಪುರ ಜಲಾಶಯ (Narayanpura Dam) 492.25 33.31 25.77 30.13 2,70,322 2,52,028
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.67 24.68 346 135

ತುಂಗಭದ್ರ ಜಲಾಶಯ ಒಟ್ಟು 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಸದ್ಯ ಜಲಾಶಯದಲ್ಲಿ 99.877 ಟಿಎಂಸಿ ನೀರು ಸಂಗ್ರಹವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ