ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ನಾಳೆ ಸಹ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕರಾವಳಿ ಮತ್ತು ಮಲೆನಾಡು ನಲುಗುತ್ತಿದೆ. ನಿರಂತರ ಮಳೆಗೆ ರಸ್ತೆ ಸಂಪರ್ಕ ಕಡಿತಗೊಂಡಿವೆ. ಅಲ್ಲಲ್ಲಿ ಗುಡ್ಡ ಕುಸಿತ ಭೀತಿ ಎದುರಾಗುತ್ತಿದೆ. ಹೀಗಾಗಿ ಮುಂಜಾಗ್ರತವಾಗಿ ಕರ್ನಾಟಕದಲ್ಲಿ ನಾಳೆ ಕೂಡ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಆಯಾ ಜಿಲ್ಲಾಧಿಕಾರಿಗಳು ಘೋಷಣೆ ಮಾಡಿದ್ದಾರೆ.

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ನಾಳೆ ಸಹ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ನಾಳೆ ಸಹ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 19, 2024 | 8:49 PM

ಬೆಂಗಳೂರು, ಜುಲೈ 19: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ (Rain) ಮುಂದುವರೆದಿದೆ. ಹಲವೆಡೆ ಮಳೆ‌ಯಿಂದಾಗಿ ಅವಾಂತರಗಳು ಸಂಭವಿಸುತ್ತಿವೆ. ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಕೆಲವೆಡೆ ಗುಡ್ಡ ಕುಸಿತ ಭೀತಿ ಎದುರಾಗುತ್ತಿದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಕೂಡ ಶಾಲಾ, ಕಾಲೇಜುಗಳಿಗೆ ರಜೆ (holiday) ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹೀಗಾಗಿ ನಾಳೆ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜ್​ಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯೂ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜುವರೆಗೆ ರಜೆ ನೀಡಿ ಡಿಸಿ ಮುಳೈ ಮುಗಿಲನ್ ಆದೇಶಿಸಿದ್ದಾರೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರಲಿದೆ.

ಇದನ್ನೂ ಓದಿ: ಕರ್ನಾಟಕದ ಯಾವೆಲ್ಲ ಹೆದ್ದಾರಿಗಳಲ್ಲಿ ಸಂಚಾರ ಬಂದ್? ಇಲ್ಲಿದೆ ವಿವರ

ಇನ್ನು ಉಡುಪಿ ಜಿಲ್ಲೆಯಲ್ಲಿ ವರ್ಷಧಾರೆ ಮುಂದುವರೆದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, PU ಕಾಲೇಜಿಗಳಿಗೆ ನಾಳೆಯೂ ರಜೆ ನೀಡಲಾಗಿದೆ. ಯುಜಿ, ಪಿಜಿ, ITI, ಡಿಪ್ಲೊಮಾ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಕೆಆರ್​ಎಸ್​ನಿಂದ ಯಾವುದೇ ಕ್ಷಣದಲ್ಲಾದರೂ ನೀರು ಹೊರಕ್ಕೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನೆ

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಾಗರ, ಸೊರಬ, ಹೊಸನಗರ ತಾಲೂಕಿನ ಶಾಲಾ ಕಾಲೇಜಿಗೆ ಆಯಾ ತಹಶೀಲ್ದಾರ್​​ಗಳು ನಾಳೆ ರಜೆ ಘೋಷಣೆ ಮಾಡಿದ್ದಾರೆ.

ಆರು ತಾಲ್ಲೂಕುಗಳ ಶಾಲೆಗಳಿಗೆ ನಾಳೆ ರಜೆ

ಹಾಸನ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಹಾಗಾಗಿ ಜಿಲ್ಲೆಯ ಆರು ತಾಲ್ಲೂಕುಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ನೀಡಿ ಡಿಡಿಪಿಐ ಹೆಚ್​​ಕೆ ಪಾಂಡು ಆದೇಶಿಸಿದ್ದಾರೆ.

ಅದೇ ರೀತಿಯಾಗಿ ಕೊಡಗು ಜಿಲ್ಲೆಯ ಅಂಗನವಾಡಿ ಶಾಲೆ ಪದವಿಪೂರ್ವ ಕಾಲೇಜುಗಳಿಗೆ ನಾಳೆ ರಜೆ  ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶಿಸಿದ್ದಾರೆ. ನಾಳೆ ಕೂಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.