Karnataka Dam Water Level: ನಾರಾಯಣಪುರ ಡ್ಯಾಂ ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

|

Updated on: Aug 04, 2024 | 7:31 AM

ಮಹರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕ್ಕೃಷ್ಣ, ಘಟ್ಟಪ್ರಭೆ, ಮಲಪ್ರಭ, ಮಾರ್ಖಂಡೇಯ, ಹಿರಣ್ಯಕೇಶಿ, ದೂದಗಂಗೆ-ವೇದಗಂಗೆ ನದಿಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹಿರಿದು ಬರುತ್ತಿದೆ. ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳು ಭರ್ತಿಯಾಗಿವೆ. ಹಾಗಾದರೆ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ ಎಂಬ ವಿವರ ಇಲ್ಲಿದೆ.

Karnataka Dam Water Level: ನಾರಾಯಣಪುರ ಡ್ಯಾಂ ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ನಾರಾಯಣಪುರ ಜಲಾಶಯ
Follow us on

ಕರ್ನಾಟಕದ ಜನತೆಗೆ ಜೀವನಾಡಿಯಾಗಿರುವ ಕೆಆರ್​ಎಸ್​, ಆಲಮಟ್ಟಿ, ತುಂಗಭದ್ರಾ, ನಾರಾಯಣಪುರ, ಸುಫಾ ಜಲಾಶಯಗಳು ಸೇರಿದಂತೆ ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಇಂದು (ಆಗಸ್ಟ್​​ 04) ಒಳಹರಿವು, ಹೊರಹರಿವು ಮತ್ತು ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 69.36 113.27 3,19,916 3,02,555
ತುಂಗಭದ್ರಾ ಜಲಾಶಯ (Tungabhadra Dam) 497.71 105.79 98.41 83.18 1,71,353 1,74,969
ಮಲಪ್ರಭಾ ಜಲಾಶಯ (Malaprabha Dam) 633.80 37.73 33.12 20.53 17,397 15,844
ಕೆ.ಆರ್.ಎಸ್ (KRS Dam) 38.04 49.45 47.34 35.37 73,500 58,667
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 139.59 70.36 61,835 3,590
ಕಬಿನಿ ಜಲಾಶಯ (Kabini Dam) 696.13 19.52 17.40 19.04 32,559 35,121
ಭದ್ರಾ ಜಲಾಶಯ (Bhadra Dam) 657.73 71.54 65.08 46.50 30,350 56,032
ಘಟಪ್ರಭಾ ಜಲಾಶಯ (Ghataprabha Dam) 662.91 51.00 47.60 37.84 34,387 34,387
ಹೇಮಾವತಿ ಜಲಾಶಯ (Hemavathi Dam) 890.58 37.10 35.22 30.35 24,100 22,425
ವರಾಹಿ ಜಲಾಶಯ (Varahi Dam) 594.36 31.10 19.51 10.89 7,933 0
ಹಾರಂಗಿ ಜಲಾಶಯ (Harangi Dam)​​ 871.38 8.50 6.92 8.21 10,214 15,312
ಸೂಫಾ (Supa Dam) 564.00 145.33 114.80 77.12 40,463 3534
ನಾರಾಯಣಪುರ ಜಲಾಶಯ (Narayanpura Dam) 492.25 33.31 24.19 30.04 2,98,585 2,92,207
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.64 24.69 808 135

ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಗೆ ಸದ್ಯ ಬರುತ್ತಿರುವ ಒಳಹರಿವು ಅಣೆಕಟ್ಟುಗಳ ಮೇಲ್ಭಾಗದ ಪ್ರದೇಶ, ಮಹಾರಾಷ್ಟ್ರ, ರಾಜ್ಯ ಸೇರಿದಂತೆ ಕೃಷ್ಣ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣವನ್ನು ಅವಲಂಬಿಸಿದೆ. ಮಳೆ ಪ್ರಮಣ ತಗ್ಗಿದರೆ ಒಳಹರಿವು ಕಡಿಮೆಯಾಗುತ್ತದೆ. ಒಂದೊಮ್ಮೆ ಮಳೆ ಹೆಚ್ಚಾದರೆ ಒಳಹರಿವು ಹೆಚ್ಚಾಗಿ ಜಲಾಶಯಗಳಿಂದ ನದಿಗೆ ನೀರು ಹರಿಸುವುದನ್ನು ಹೆಚ್ಚಿಸಲಾಗುತ್ತದೆ. ಇದು ನಿರಂತರ ಪ್ರಕ್ರಿಯೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ