Monsoon: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ, ದಕ್ಷಿಣ ಒಳನಾಡಿನಲ್ಲಿ 1 ವಾರ ಭಾರೀ ಮಳೆ

ಇವತ್ತು ಕರ್ನಾಟಕ ಗಡಿಗೆ ನೈಋತ್ಯ ಮಾನ್ಸೂನ್ ಪ್ರವೇಶ ಮಾಡಿದೆ. ಹೀಗಾಗಿ ಇವತ್ತಿನಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ನೈಋತ್ಯ ಮಾನ್ಸೂನ್ ಹಿನ್ನೆಲೆ ಇವತ್ತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಯಚೂರು, ಕೊಪ್ಪಳ ಮಂಡ್ಯ, ಮೈಸೂರು ಸೇರಿದಂತೆ ಗುಡುಗು ಸಹಿತ ಭಾರೀ ಮಳೆ ಮೂನ್ಸುಚನೆ ನೀಡಲಾಗಿದೆ. 40-50 ಕಿಮೀ ವೇಗದ ಗಾಳಿಯೊಂದಿಗೆ ಮಳೆ ಸಾಧ್ಯತೆ ಇದೆ.

Monsoon: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ, ದಕ್ಷಿಣ ಒಳನಾಡಿನಲ್ಲಿ 1 ವಾರ ಭಾರೀ ಮಳೆ
ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ, ದಕ್ಷಿಣ ಒಳನಾಡಿನಲ್ಲಿ 1 ವಾರ ಭಾರೀ ಮಳೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 02, 2024 | 3:09 PM

ಬೆಂಗಳೂರು, ಜೂನ್​ 2: ನಿರೀಕ್ಷೆಗೂ ಮೊದಲೇ ಭಾರತದ ದಕ್ಷಿಣ ರಾಜ್ಯವಾದ ಕೇರವಳವನ್ನು ನೈಋತ್ಯ ಮಾನ್ಸೂನ್ ಪ್ರವೇಶ (Monsoon Rain)  ಮಾಡಿದೆ. ಇದರ ಬೆನ್ನಲ್ಲೇ  ಇವತ್ತು ಕರ್ನಾಟಕ (Karnataka) ಗಡಿಗೆ ನೈಋತ್ಯ ಮಾನ್ಸೂನ್ ಪ್ರವೇಶ ಮಾಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಾನ್ಸೂನ್ ಪ್ರವೇಶವಾಗಲಿದೆ. ಹೀಗಾಗಿ ಇವತ್ತಿನಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಇಂದಿನಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ ಇದೆ.

ಇನ್ನು ಉತ್ತರ ಒಳನಾಡಿನಲ್ಲೂ ಜೂನ್ 4 – 5 ರಿಂದ ಭಾರೀ ಮಳೆ ಸಾಧ್ಯತೆ ಇದ್ದು, ಜೂನ್ 7 ರಂದು ಇಡೀ ರಾಜ್ಯಾದ್ಯಂತ ಮುಂಗಾರು ಮಳೆ ವ್ಯಾಪಿಸಲಿದೆ. ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ 30-40 ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಅವಾಂತರ: ಜಲಾವೃತಗೊಂಡ ರಸ್ತೆಗಳು, ಮರ ಬಿದ್ದು ಅನೇಕ ಕಡೆ ಸಂಚಾರ ವ್ಯತ್ಯಯ

ಇನ್ನು ನೈಋತ್ಯ ಮಾನ್ಸೂನ್ ಹಿನ್ನೆಲೆ ಇವತ್ತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಯಚೂರು, ಕೊಪ್ಪಳ ಮಂಡ್ಯ, ಮೈಸೂರು ಸೇರಿದಂತೆ ಗುಡುಗು ಸಹಿತ ಭಾರೀ ಮಳೆ ಮೂನ್ಸುಚನೆ ನೀಡಲಾಗಿದೆ. 40-50 ಕಿಮೀ ವೇಗದ ಗಾಳಿಯೊಂದಿಗೆ ಮಳೆ ಸಾಧ್ಯತೆ ಇದೆ.

ಇವತ್ತು ಸಾಯಂಕಾಲ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದ್ದು, ನಿನ್ನೆ ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿದ್ದ.

ನಿನ್ನೆ ಸುರಿದ ಮಳೆಯಿಂದಾಗಿ ಕೆಂಗೇರಿ ಬಳಿ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ಇದ್ರಿಂದಾಗಿ ಆ್ಯಂಬುಲೆನ್ಸ್​​ವೊಂದು ಸಂಚಾರ ದಟ್ಟಣೆಯಲ್ಲಿ ಸಿಲುಕಿತ್ತು. ಇನ್ನೂ ಮಳೆಗೆ ನಗರದಲ್ಲಿ 32ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, ಬಿಬಿಎಂಪಿ ಸಿಬ್ಬಂದಿಗಳು ತೆರವು ಮಾಡಿದ್ದಾರೆ.

ಇದನ್ನೂ ಓದಿ: Bengaluru Rains: ಯಶವಂತಪುರ ಸೇರಿ ಹಲವೆಡೆ ತುಂತುರು‌ ಮಳೆ: ಇನ್ನೂ 5 ದಿನ ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ

ಇತ್ತ ಆನೇಕಲ್, ಎಲೆಕ್ಟ್ರಾನಿಕ್ ಸುತ್ತಮುತ್ತ ಮಳೆ ಸುರಿದಿದ್ದು, ಜನ ಪರದಾಡಿದ್ದರು. ಹೊಸೂರು ಹೈವೇಯಲ್ಲಿ ಸುಮಾರು ನಾಲ್ಕು ಕಿಲೋ ಮೀಟರ್​ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅತ್ತ, ನೆಲಮಂಗಲದಲ್ಲಿ ಸುರಿದ ಜೋರು ಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸವಾರರು ಪರದಾಡಿದ್ದರು.

ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಗಾರು ಪ್ರವೇಶವಾಗ್ತಿದ್ದು ಬಿಬಿಎಂಪಿ ಎಚ್ಚೆತ್ತುಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:07 pm, Sun, 2 June 24

ತಾಜಾ ಸುದ್ದಿ