ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್, ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳ ಸಜ್ಜು

Karnataka Monsoon Session 2024: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಇದೇ ಜುಲೈ 15ರಿಂದ ಹತ್ತು ದಿನಗಳ ಕಾಲ ಮುಂಗಾರು ಅಧಿವೇಶನ ನಡೆಯಲಿದೆ. ಹೀಗಾಗಿ ಈ ಬಾರಿ ಅಧಿವೇಶನ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಯಾಕಂದ್ರೆ, ರಾಜ್ಯದಲ್ಲಿ ಕೆಲ ಹಗರಣಗಳು ಮತ್ತು ಬೆಲೆ ಏರಿಕೆ ಮಾಡಲಾಗಿದೆ. ಇವುಗಳ ವಿರುದ್ಧ ಹೋರಾಟಕ್ಕೆ ವಿಪಕ್ಷಗಳು ಸಜ್ಜಾಗಿವೆ.

ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್, ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳ ಸಜ್ಜು
ವಿಧಾನಸೌಧ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Jul 01, 2024 | 7:04 PM

 ಬೆಂಗಳೂರು, (ಜುಲೈ 01): ಕರ್ನಾಟಕ ವಿಧಾನಸಭೆಯ ಮುಂಗಾರ ಅಧಿವೇಶಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 15ರಿಂದ ಜುಲೈ 26ರವರೆಗೆ ಹತ್ತುದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನದ ದಿನಾಂಕ ನಿಗದಿಗೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ. ಇನ್ನು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಆಡಳಿತದಲ್ಲಿನ ಲೋಪ ಎತ್ತಿ ಸರ್ಕಾರ ಮೇಲೆ ಮುಗಿಬೀಳಲು ಸಜ್ಜಾಗಿವೆ. ಅದರಲ್ಲೂ ಮುಖ್ಯವಾಗಿ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಲಿವೆ.

ಈ ಮುಂಗಾರು ಅಧಿವೇಶಷನದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ. ಇಂಧನ, ಹಾಲ ಬೆಲೆ ಏರಿಕೆ ವಿರೋಧಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿವೆ. ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣ, ಮೈಸೂರು ಮುಡಾದಲ್ಲಿನ ಹಗರಣಗಳನ್ನು ಇಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕುವ ತಂತ್ರವನ್ನು ಬಿಜೆಪಿ-ಜೆಡಿಎಸ್ ಮಾಡಿವೆ.

ಇದನ್ನೂ ಓದಿ: ಕೇಂದ್ರ ಜಾರಿಗೆ ತಂದಿರುವ ಹೊಸ ಕಾನೂನುಗಳಿಗೆ ತಿದ್ದುಪಡಿ ತರಲು ಸಿದ್ದರಾಮಯ್ಯ ಸರ್ಕಾರ ಚಿಂತನೆ 

ಮತ್ತೊಂದೆಡೆ ಆಡಳಿತರೂಢ  ಕಾಂಗ್ರೆಸ್ ಸರ್ಕಾರ, ವಿಪಕ್ಷಗಳ ಆರೋಪ, ಪ್ರಶ್ನೆಗಳನ್ನು ಹೇಗೆ ಎದುರಿಸುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ. ಒಟ್ಟಿನಲ್ಲಿ ಮುಂಗಾರು ಅಧಿವೇಶನ ಭಾರೀ ಕೋಲಾಹಲಕ್ಕೆ ಕಾರಣವಾಗುವುದಂತೂ ಸತ್ಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್