ಬೆಂಗಳೂರು, (ಜುಲೈ 01): ಕರ್ನಾಟಕ ವಿಧಾನಸಭೆಯ ಮುಂಗಾರ ಅಧಿವೇಶಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 15ರಿಂದ ಜುಲೈ 26ರವರೆಗೆ ಹತ್ತುದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನದ ದಿನಾಂಕ ನಿಗದಿಗೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ. ಇನ್ನು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಆಡಳಿತದಲ್ಲಿನ ಲೋಪ ಎತ್ತಿ ಸರ್ಕಾರ ಮೇಲೆ ಮುಗಿಬೀಳಲು ಸಜ್ಜಾಗಿವೆ. ಅದರಲ್ಲೂ ಮುಖ್ಯವಾಗಿ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಲಿವೆ.
ಈ ಮುಂಗಾರು ಅಧಿವೇಶಷನದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ. ಇಂಧನ, ಹಾಲ ಬೆಲೆ ಏರಿಕೆ ವಿರೋಧಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿವೆ. ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣ, ಮೈಸೂರು ಮುಡಾದಲ್ಲಿನ ಹಗರಣಗಳನ್ನು ಇಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕುವ ತಂತ್ರವನ್ನು ಬಿಜೆಪಿ-ಜೆಡಿಎಸ್ ಮಾಡಿವೆ.
ಇದನ್ನೂ ಓದಿ: ಕೇಂದ್ರ ಜಾರಿಗೆ ತಂದಿರುವ ಹೊಸ ಕಾನೂನುಗಳಿಗೆ ತಿದ್ದುಪಡಿ ತರಲು ಸಿದ್ದರಾಮಯ್ಯ ಸರ್ಕಾರ ಚಿಂತನೆ
ಮತ್ತೊಂದೆಡೆ ಆಡಳಿತರೂಢ ಕಾಂಗ್ರೆಸ್ ಸರ್ಕಾರ, ವಿಪಕ್ಷಗಳ ಆರೋಪ, ಪ್ರಶ್ನೆಗಳನ್ನು ಹೇಗೆ ಎದುರಿಸುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ. ಒಟ್ಟಿನಲ್ಲಿ ಮುಂಗಾರು ಅಧಿವೇಶನ ಭಾರೀ ಕೋಲಾಹಲಕ್ಕೆ ಕಾರಣವಾಗುವುದಂತೂ ಸತ್ಯ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.