ಕೋಲಾರದಲ್ಲಿ ನೈತಿಕ ಪೊಲೀಸ್ಗಿರಿ: ಮುಸ್ಲಿಂ ಮಹಿಳೆಯನ್ನು ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದ ಯುವಕನಿಗೆ ಬೆದರಿಕೆ
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ ಗ್ರಾಮದ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದರು. ಈ ವೇಳೆ ಆತನನ್ನು ಹಿಂಬಾಲಿಸಿದ ಮುಸ್ಲಿಂ ಯುವಕರ ತಂಡ ವಿಷ್ಣು ಹಾಗೂ ಮಹಿಳೆ ಸಮೀನಾ ತಾಜ್ರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿ ವಿಡಿಯೋ ಮಾಡಿದ್ದಾರೆ.
ಕೋಲಾರ, ಆಗಸ್ಟ್ 26: ಮುಸ್ಲಿಂ ಮಹಿಳೆಯನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಹಿಂದೂ ಯುವಕನನ್ನು ಅಡ್ಡಗಟ್ಟಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ (moral policing) ನಡೆಸಿದ್ದಾರೆ. ನಗರದ ಅಂತರಗಂಗೆ ರಸ್ತೆಯಲ್ಲಿ ನಿನ್ನೆ ಘಟನೆ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆ ಹಾಗೂ ಆಕೆಯ ಮಗುವನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಯುವಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಯುವಕನಿಂದ ಬೆದರಿಕೆ ಹಾಕಿರುವ ಕುರಿತು ದೂರು ಪಡೆದಿದ್ದಾರೆ.
ಜಿಲ್ಲೆಯ ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ ಗ್ರಾಮದ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದರು. ಈ ವೇಳೆ ಆತನನ್ನು ಹಿಂಬಾಲಿಸಿದ ಮುಸ್ಲಿಂ ಯುವಕರ ತಂಡ ವಿಷ್ಣು ಹಾಗೂ ಮಹಿಳೆ ಸಮೀನಾ ತಾಜ್ರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಮಾಡಿ ವೈರಲ್ ಮಾಡಿರುವ ಯುವಕರ ವಿರುದ್ದ ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
ನೈತಿಕ ಪೊಲೀಸ್ ಗಿರಿ: ಯುವಕನಿಗೆ ಮನ ಬಂದಂತೆ ಥಳಿತ
ದಾವಣಗೆರೆ: ಇತ್ತೀಚೆಗೆ ನಗರದಲ್ಲಿ ಏಳು ಜನ ಸೇರಿ ಯುವಕನ ಮೇಲೆ ಹಲ್ಲೆ ಮಾಡುವ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದಿದ್ದರು. ಮೇ 31 ರಂದು ಜಿಲ್ಲೆಯ ಹರಿಹರ ನಗರದ ಬೆಂಕಿನಗರದ ಮದರಸಾ ಬಳಿ ಖಾಲಿಕೊಠಡಿಯಲ್ಲಿ ಹಲ್ಲೆ ಮಾಡಲಾಗಿತ್ತು. ಹಲ್ಲೆಗೆ ಸಂಬಂಧಿಸಿ ನಾಲ್ವರನ್ನ ಹರಿಹರ ಪೊಲೀಸರು ವಶಕ್ಕೆ ಪಡೆದಿದ್ದರು.
ಇದನ್ನೂ ಓದಿ: ಬೀದರ್: ನೈತಿಕ ಪೊಲೀಸ್ಗಿರಿ ಪ್ರಕರಣ; ಮೂವರು ಯುವಕರ ಬಂಧನ
ಹರಿಹರದ ಕಾಳಿದಾಸ ನಗರದ ನಿವಾಸಿ ಮೊಹಮ್ಮದ್ ಅಲಿ (26) ಹಲ್ಲೆಗೊಳಗಾದ ಯುವಕ. ಇಲ್ಲಿ ಹಲ್ಲೆ ಮಾಡಿದರು ಹಾಗೂ ಹಲ್ಲೆಗೆ ಒಳಗಾದವರು ಒಂದು ಧರ್ಮಕ್ಕೆ ಸೇರಿದ ಯುವಕ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾಹಿತಿ ನೀಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.