ಕೋಲಾರದಲ್ಲಿ ನೈತಿಕ ಪೊಲೀಸ್​ಗಿರಿ: ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದ ಯುವಕನಿಗೆ ಬೆದರಿಕೆ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ ಗ್ರಾಮದ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್​ನಲ್ಲಿ ಕೆರದುಕೊಂಡು ಹೋಗುತ್ತಿದ್ದರು. ಈ ವೇಳೆ ಆತನನ್ನು ಹಿಂಬಾಲಿಸಿದ ಮುಸ್ಲಿಂ ಯುವಕರ ತಂಡ ವಿಷ್ಣು ಹಾಗೂ ಮಹಿಳೆ ಸಮೀನಾ ತಾಜ್​ರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿ ವಿಡಿಯೋ ಮಾಡಿದ್ದಾರೆ.

ಕೋಲಾರದಲ್ಲಿ ನೈತಿಕ ಪೊಲೀಸ್​ಗಿರಿ: ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದ ಯುವಕನಿಗೆ ಬೆದರಿಕೆ
ಕೋಲಾರದಲ್ಲಿ ನೈತಿಕ ಪೊಲೀಸ್​ಗಿರಿ: ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದ ಯುವಕನಿಗೆ ಬೆದರಿಕೆ
Edited By:

Updated on: Aug 26, 2024 | 8:21 PM

ಕೋಲಾರ, ಆಗಸ್ಟ್​​ 26: ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಹಿಂದೂ ಯುವಕನನ್ನು ಅಡ್ಡಗಟ್ಟಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ (moral policing) ನಡೆಸಿದ್ದಾರೆ. ನಗರದ ಅಂತರಗಂಗೆ ರಸ್ತೆಯಲ್ಲಿ ನಿನ್ನೆ ಘಟನೆ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.  ಮಹಿಳೆ ಹಾಗೂ ಆಕೆಯ ಮಗುವನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಯುವಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಯುವಕನಿಂದ ಬೆದರಿಕೆ ಹಾಕಿರುವ ಕುರಿತು ದೂರು ಪಡೆದಿದ್ದಾರೆ.

ಜಿಲ್ಲೆಯ ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ ಗ್ರಾಮದ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್​ನಲ್ಲಿ ಕೆರದುಕೊಂಡು ಹೋಗುತ್ತಿದ್ದರು. ಈ ವೇಳೆ ಆತನನ್ನು ಹಿಂಬಾಲಿಸಿದ ಮುಸ್ಲಿಂ ಯುವಕರ ತಂಡ ವಿಷ್ಣು ಹಾಗೂ ಮಹಿಳೆ ಸಮೀನಾ ತಾಜ್​ರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಮಾಡಿ ವೈರಲ್ ಮಾಡಿರುವ ಯುವಕರ ವಿರುದ್ದ ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನೈತಿಕ ಪೊಲೀಸ್​ ಗಿರಿ: ಯುವಕನಿಗೆ ಮನ ಬಂದಂತೆ ಥಳಿತ

ದಾವಣಗೆರೆ: ಇತ್ತೀಚೆಗೆ ನಗರದಲ್ಲಿ ಏಳು ಜನ ಸೇರಿ ಯುವಕನ ಮೇಲೆ ಹಲ್ಲೆ ಮಾಡುವ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದಿದ್ದರು. ಮೇ 31 ರಂದು ಜಿಲ್ಲೆಯ ಹರಿಹರ ನಗರದ ಬೆಂಕಿನಗರದ ಮದರಸಾ ಬಳಿ ಖಾಲಿ‌ಕೊಠಡಿಯಲ್ಲಿ ಹಲ್ಲೆ ಮಾಡಲಾಗಿತ್ತು. ಹಲ್ಲೆಗೆ ಸಂಬಂಧಿಸಿ ನಾಲ್ವರನ್ನ ಹರಿಹರ ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಬೀದರ್​: ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ

ಹರಿಹರದ ಕಾಳಿದಾಸ ನಗರದ ನಿವಾಸಿ ಮೊಹಮ್ಮದ್ ಅಲಿ (26) ಹಲ್ಲೆಗೊಳಗಾದ ಯುವಕ. ಇಲ್ಲಿ ಹಲ್ಲೆ ಮಾಡಿದರು ಹಾಗೂ ಹಲ್ಲೆಗೆ ಒಳಗಾದವರು ಒಂದು ಧರ್ಮಕ್ಕೆ ಸೇರಿದ ಯುವಕ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾಹಿತಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow Us