ಶಿವಮೊಗ್ಗದಲ್ಲಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ: ಸ್ಥಳೀಯ ಯುವಕರಿಂದ ಹಲ್ಲೆ, ಅನುಚಿತ ವರ್ತನೆ ಆರೋಪ

ಪ್ರೇಮಿಗಳ ಮೇಲೆ ಸ್ಥಳೀಯ ನಾಲ್ವರು ಯುವಕರಿಂದ ಅನುಚಿತ ವರ್ತನೆ ಮತ್ತು ಇಬ್ಬರು ಯುವಕರ ಮೇಲೆ ಹಲ್ಲೆ ಮಾಡುವ ಮೂಲಕ ನೈತಿಕ ಪೊಲೀಸ್​ಗಿರಿ ಮೆರೆದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯ ಬಳಿ ನಿನ್ನೆ ನಡೆದಿದೆ. ಯುವತಿ ಕಿಡ್ನ್ಯಾಪ್​ ಬಗ್ಗೆ ಪ್ರಿಯಕರ ಹಾಗೂ ಸ್ನೇಹಿತನಿಂದ ಪೊಲೀಸರಿಗೆ ದೂರು ನೀಡಲಾಗಿದೆ.

ಶಿವಮೊಗ್ಗದಲ್ಲಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ: ಸ್ಥಳೀಯ ಯುವಕರಿಂದ ಹಲ್ಲೆ, ಅನುಚಿತ ವರ್ತನೆ ಆರೋಪ
ಶಿವಮೊಗ್ಗದಲ್ಲಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ: ಸ್ಥಳೀಯ ಯುವಕರಿಂದ ಹಲ್ಲೆ, ಅನುಚಿತ ವರ್ತನೆ ಆರೋಪ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 03, 2024 | 3:06 PM

ಶಿವಮೊಗ್ಗ, ಜೂನ್​​ 03: ತುಂಗಾ ಜಲಾಶಯ ವೀಕ್ಷಣೆಗೆ ತೆರಳಿದ್ದ ಪ್ರೇಮಿಗಳ (lovers) ಮೇಲೆ ನೈತಿಕ ಪೊಲೀಸ್​ಗಿರಿ (Moral Policing) ನಡೆದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯ ಬಳಿ ನಡೆದಿದೆ. ನಿನ್ನೆ ತುಂಗಾ ಜಲಾಶಯದ ವೀಕ್ಷಣೆಗೆ ಪ್ರೇಮಿಗಳು ತೆರಳಿದ್ದರು. ಜೊತೆಗೆ ಅವರೊಟ್ಟಿಗೆ ಪ್ರಿಯಕರನ ಸ್ನೇಹಿತ ತೆರಳಿದ್ದ. ಈ ವೇಳೆ ಸ್ಥಳೀಯ ನಾಲ್ವರು ಯುವಕರಿಂದ ಅನುಚಿತ ವರ್ತನೆ ಮತ್ತು ಇಬ್ಬರು ಯುವಕರ ಮೇಲೆ ಹಲ್ಲೆ ಆರೋಪ ಮಾಡಿದ್ದಾರೆ.

ಹಲ್ಲೆ ಮಾಡುತ್ತಿದ್ದಂತೆ ಪ್ರಿಯಕರ ಹಾಗೂ ಆತನ ಸ್ನೇಹಿತ ಸ್ಥಳದಿಂದ ಓಡಿಹೋಗಿದ್ದಾರೆ. ಯುವತಿಯನ್ನು ಮಾತ್ರ ಸ್ಥಳೀಯ ಯುವಕರು ಸ್ಥಳದಲ್ಲೇ ಇರಿಸಿಕೊಂಡಿದ್ದಾರೆ. ಯುವತಿ ಕಿಡ್ನ್ಯಾಪ್​ ಬಗ್ಗೆ ಪ್ರಿಯಕರ ಹಾಗೂ ಸ್ನೇಹಿತನಿಂದ ದೂರು ನೀಡಲಾಗಿದೆ.

ಇದನ್ನೂ ಓದಿ: ಬೀದರ್​: ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ

ದೂರು ಮೇರೆಗೆ ಸ್ಥಳಕ್ಕೆ ತೆರಳಿದ್ದ ತುಂಗಾನಗರ ಠಾಣೆ ಪೊಲೀಸರು ಯುವತಿ, ಸ್ಥಳೀಯ ಯುವಕರನ್ನು ಠಾಣೆಗೆ ಕರೆತಂದಿದ್ದು, ಯುವತಿ ಹಾಗೂ ಯುವಕರ ವಿಚಾರಣೆ ಮಾಡಿದ್ದಾರೆ.

ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ: ಯುವಕನನ್ನು ರೂಮ್​ನಲ್ಲಿ ಕೂಡಿಹಾಕಿ ಹಲ್ಲೆ

ಇನ್ನು ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಯುವಕನೊಬ್ಬನನ್ನ ರೂಮ್​ನಲ್ಲಿ ಹಾಕಿ ಹಲ್ಲೆಎಂಟತ್ತು ಜನರಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿತ್ತು. ಯುವಕ ಪರಿ ಪರಿಯಾಗಿ ಬೇಡಿಕೊಂಡರು ಬಿಡದೇ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆಯಲಾಗಿತ್ತು.

ಇದನ್ನೂ ಓದಿ: ಬೆಳಗಾವಿಯಲ್ಲಿ ಹಿಂದೂ ಕಾರ್ಯಕರ್ತರಿಂದ ನೈತಿಕ ಪೊಲೀಸ್​ಗಿರಿ: ಅಕ್ರಮವಾಗಿ ಗೋವು ಸಾಗಾಟ ಮಾಡ್ತಿದ್ದ ಚಾಲಕನಿಗೆ ಥಳಿತ

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್  ಆದ ವಿಡಿಯೋದಲ್ಲಿ ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರು. ಹಲ್ಲೆ ಮಾಡಿ ನಂತರ ತಲೆ ಬೊಳಿಸಿ ಹಿಂಸೆ ನೀಡಿದ ಮತ್ತೊಂದು ವಿಡಿಯೋ ಕೂಡ ವೈರಲ್ ಆಗಿತ್ತು. ಹಲ್ಲೆಗೆ ನಿಖರ ಕಾರಣ ಮಾತ್ರ ತಿಳಿದುಬಂದಿಲ್ಲ.

ಘಟನೆ ಬಗ್ಗೆ ‌ಹಲ್ಲೆಗೊಳಗಾದ ಯುವಕ ಪೊಲೀಸರಿಗೆ ಅಧಿಕೃತ ದೂರು ನೀಡಿದ್ದ. ಹಲ್ಲೆ ಮಾಡುವಾಗ ಐದಾರು ಜನ ತಮ್ಮ ಮೊಬೈಲ್​ನಲ್ಲಿ ಯುವಕನ ವಿಡಿಯೋ ಮಾಡಿದ್ದಾರೆ. ಪ್ರಕರಣದ ಪತ್ತೆಗೆ ಹರಿಹರ ಪೊಲೀಸರು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು